Kranti : ಧರಣಿ ಥೀಮ್ ಸಾಂಗ್ ಬಿಡುಗಡೆಗೆ ಕೆಲವೇ ಕ್ಷಣಗಳು ಬಾಕಿ…
ವಿ. ಹರಿಕೃಷ್ಣ ಮೊದಲ ಭಾರಿಗೆ ಆಕ್ಷನ್ ಕಟ್ ಹೇಳುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಚಿತ್ರದ ಮೊದಲ ಸಾಂಗ್ ಧರಣಿ ಬಿಡುಗಡೆಗೆ ಕೆಲವೇ ಕ್ಷಣಗಳು ಬಾಕಿ ಇವೆ.
ಇಂದು ಸಂಜೆ ಏಳು ಗಂಟೆಗೆ ಕಾಂತ್ರಿ ಚಿತ್ರದ ಥೀಮ್ ಸಾಂಗ್ ಧರಣಿ ಹಾಡು ಬಿಡುಗಡೆಯಾಗಲಿದೆ. ಧರಣಿ ಹಾಡಿಗೆ ವಿ ನಾಗೇಂದ್ರ ಪ್ರಸಾದ್ ಅವರು ಸಾಹಿತ್ಯ ಬರೆದಿದ್ದಾರೆ. ಹಾಡಿನ ಸಾಹಿತ್ಯದ ಈಗಾಗಲೇ ಬಿಡುಗಡೆಯಾಗಿದ್ದು, ಮೆಚ್ಚುಗೆ ಪಡೆದುಕೊಂಡಿದೆ.
ಮೈಸೂರಿನ ವಿಜಯ ಟೆಂಟ್ ಹೌಸ್ ನಲ್ಲಿ ನಡೆಯುವ ಸಮಾರಂಭದಲ್ಲಿ ಅಧಿಕೃತವಾಗಿ ಸಾಂಗ್ ಬಿಡುಗಡಯಾಗಲಿದೆ. ದರ್ಶನ್ ಹಾಗೂ ವಿ. ಹರಿಕೃಷ್ಣ ಕಾಂಬಿನೇಷನ್ ಆಲ್ಬಮ್‌ಗಳೆಲ್ಲ ಹಿಟ್ ಆಗಿರುವ ಕಾರಣ ಇದೀಗ ಕ್ರಾಂತಿ ಚಿತ್ರದ ಕುರಿತು ನಿರೀಕ್ಷೆಗಳು ಹೆಚ್ಚಾಗಿವೆ.
ಶೈಲಜಾ ನಾಗ್ ಮತ್ತು ಬಿ ಸುರೇಶ ನಿರ್ಮಾಣದಲ್ಲಿ ಮೂಡಿಬರುತ್ತಿವರ ಕ್ರಾಂತಿ ಚಿತ್ರದಲ್ಲಿ ರಚಿತಾ ರಾಮ್, ಸುಮಲತಾ ಅಂಬರೀಶ್, ರವಿಚಂದ್ರನ್, ಉಮಾಶ್ರೀ, ಸಂಯುಕ್ತ ಹೊರ್ನಾಡ್ ಮತ್ತು ವೈನಿಧಿ ಜಗದೀಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Kranti: Just a few moments left for the release of the Dharani theme song…








