ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರ್ನಾಟಕದ ಭಜ್ಜಿ.. ಆದ್ರೆ ಟೀಮ್ ಇಂಡಿಯಾದ ಕೇರಂ ಬೌಲರ್..! ನಮ್ಮ ಬೆಂಗಳೂರಿನ ಕೆ. ಗೌತಮ್..!

admin by admin
June 12, 2021
in Newsbeat, Sports, ಕ್ರೀಡೆ
k. goutham karnataka saakshatv
Share on FacebookShare on TwitterShare on WhatsappShare on Telegram

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಕರ್ನಾಟಕದ ಭಜ್ಜಿ.. ಆದ್ರೆ ಟೀಮ್ ಇಂಡಿಯಾದ ಕೇರಂ ಬೌಲರ್..! ನಮ್ಮ ಬೆಂಗಳೂರಿನ ಕೆ. ಗೌತಮ್..!

k. goutham karnataka saakshatvಕೃಷ್ಣಪ್ಪ ಗೌತಮ್.. ನಮ್ಮ ಬೆಂಗಳೂರಿನ ಯುವಕ.. ಇದೀಗ ಶ್ರೀಲಂಕಾ ವಿರುದ್ಧದ ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಆಡಲು ರೆಡಿಯಾಗಿದ್ದಾರೆ.
ಹೆಡ್ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ಶಿಖರ್ ಧವನ್ ನಾಯಕತ್ವದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಟ್ರಿಕೊಡಲು ತುದಿಗಾಲಿನಲ್ಲಿ ನಿಂತಿದ್ದಾರೆ.
ಆಫ್ ಸ್ಪಿನ್ನರ್ ಕಮ್ ಕೆಳ ಕ್ರಮಾಂಕದ ಸ್ಫೋಟಕ ಬ್ಯಾಟ್ಸ್ ಮೆನ್ ಆಗಿರುವ ಕೆ. ಗೌತಮ್ ಈಗಾಗಲೇ ರಾಜ್ಯ ಕ್ರಿಕೆಟ್ ನಲ್ಲಿ ಸಾಕಷ್ಟು ಸುದ್ದಿ ಮಾಡಿದ್ದಾರೆ. ಹಾಗೇ ಐಪಿಎಲ್ ನಲ್ಲೂ ಕೂಡ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದಾರೆ.
ಕರ್ನಾಟಕ ವಿವಿಧ ವಯೋಮಿತಿ ಟೂರ್ನಿಯಲ್ಲಿ ಆಡಿ 2012ರಲ್ಲಿ ಚೊಚ್ಚಲ ರಣಜಿ ಪಂದ್ಯವನ್ನಾಡಿದ್ದರು. ಆದ್ರೆ ಗೌತಮ್ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ನಾಲ್ಕು ವರ್ಷಗಳ ಬಳಿಕ ಮತ್ತೆ ರಾಜ್ಯ ತಂಡವನ್ನು ಸೇರಿಕೊಂಡ್ರು. ಆ ನಂತರ ಹಿಂತಿರುಗಿ ನೋಡಲೇ ಇಲ್ಲ. ಇಲ್ಲಿಯವರೆಗೆ 42 ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿರುವ ಗೌತಮ್, 1045 ಹಾಗೂ 166 ವಿಕೆಟ್ ಗಳನ್ನು ಕಬಳಿಸಿದ್ದಾರೆ. k. goutham karnataka saakshatvಹಾಗೇ 47 ಲಿಸ್ಟ್ ಎ ಪಂದ್ಯಗಳಲ್ಲಿ 558 ರನ್ ಹಾಗೂ 70 ವಿಕೆಟ್ ಗಳನ್ನು ಕಬಳಿಸಿದ್ದಾರೆ. 62 ದೇಶಿ ಟಿ-ಟ್ವೆಂಟಿ ಪಂದ್ಯಗಳಲ್ಲಿ 594 ರನ್ ಹಾಗೂ 41 ವಿಕೆಟ್ ಗಳನ್ನು ಪಡೆದಿದ್ದಾರೆ.
ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಸದ್ಯ ರಾಜಸ್ತಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಟಿ-ಟ್ವೆಂಟಿ ಸ್ಪೆಷಲಿಸ್ಟ್ ಆಲ್ ರೌಂಡರ್ ಆಗಿರುವ ಗೌತಮ್ ಅವರು ಸ್ಪಿನ್ ದಂತ ಕತೆ ಎರಪಲ್ಲಿ ಪ್ರಸನ್ನ ಅವರ ಶಿಷ್ಯ. ಹರ್ಭಜನ್ ಸಿಂಗ್ ಶೈಲಿಯನ್ನು ಅನುಕರಣೆ ಮಾಡುವ ಗೌತಮ್ ಅವರನ್ನು ಒಡನಾಡಿಗಳು ಪ್ರೀತಿಯಿಂದ ಭಜ್ಜಿ ಅಂತ ಕರೆಯುತ್ತಾರೆ. ಆರ್. ಅಶ್ವಿನ್ ಅವರ ಪ್ರೇರಣೆ ಹಾಗೂ ಸಿಎಸ್ ಕೆ ನಾಯಕ ಮಹೇಂದ್ರ ಸಿಂಗ್ ಧೋನಿಯವರ ಸಲಹೆ, ಎನ್ ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ k. goutham karnataka saakshatvಅವರ ಮಾರ್ಗದರ್ಶನದಿಂದ ಗೌತಮ್ ಒಬ್ಬ ಅದ್ಭುತ ಸ್ಪಿನ್ನರ್ ಆಗಿ ರೂಪುಗೊಂಡಿದ್ದಾರೆ.
ಆರಂಭದಲ್ಲಿ ನಾನು ಹರ್ಭಜನ್ ಸಿಂಗ್ ಅವರನ್ನು ಅನುಕರಣೆ ಮಾಡಿಕೊಂಡು ಬೌಲಿಂಗ್ ಮಾಡುತ್ತಿದ್ದೆ. ಹೀಗಾಗಿ ನನ್ನ ಸ್ನೇಹಿತರು ನನ್ನನ್ನು ಭಜ್ಜಿ ಅಂತ ಕರೆಯುತ್ತಿದ್ದರು ಎಂದು ಹೇಳುತ್ತಾರೆ ಗೌತಮ್.

ಹಾಗಂತ ನಾನು ಹರ್ಭಜನ್ ಸಿಂಗ್ ಅವರಂತೆ ದೂಸ್ರಾ ಎಸೆತಗಳನ್ನು ಹಾಕುತ್ತಿರಲಿಲ್ಲ. ಆದ್ರೆ ನಾನು ಕೇರಂ ಎಸೆತಗಳನ್ನು ಎಸೆಯುತ್ತಿದ್ದೆ. ಕೇರಂ ಎಸೆತಗಳನ್ನು ಹಾಕಲು ನಾನೇ ಕಲಿತುಕೊಂಡೆ. ಅತ್ಯುತ್ತಮ ಮಟ್ಟದಲ್ಲಿ ಆಡುವಾಗ ನಾವು ನಮ್ಮತನವನ್ನು ಮೈಗೂಡಿಸಿಕೊಳ್ಳಬೇಕು. ಆಗ ಮಾತ್ರ ಯಶ ಸಾಧಿಸಲು ಸಾಧ್ಯ ಎನ್ನುತ್ತಾರೆ ಕೆ. ಗೌತಮ್.
k. goutham karnataka saakshatvಇನ್ನು ಐಪಿಎಲ್ ನಲ್ಲಿ ಆಡುವಾಗ ಒತ್ತಡಗಳು ಇರುತ್ತಿರಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಗೌತಮ್, ಐಪಿಎಲ್ ನಲ್ಲಿ ನಿಮ್ಮ ಬೆಲೆ ಎಷ್ಟು ಎಂಬುದರ ಬಗ್ಗೆ ಯೋಚನೆ ಮಾಡಬಾರದು. ನೈಜ ಆಟವನ್ನು ಆಡಬೇಕು ಅಷ್ಟೇ. ಫ್ರಾಂಚೈಸಿ ಎಷ್ಟು ಮೊತ್ತಕ್ಕೆ ಖರೀದಿ ಮಾಡಿದ್ದಾರೆ ಎಂಬುದು ಮುಖ್ಯವಲ್ಲ. ಆಟದಲ್ಲಿ ನಿಮ್ಮ ಪ್ರದರ್ಶನ ಹೇಗಿರುತ್ತೆ ಅನ್ನೋದು ಮುಖ್ಯವಾಗಿರುತ್ತದೆ. ಸಿಎಸ್ ಕೆ ತಂಡದಲ್ಲಿರುವಾಗ ಧೋನಿ ಭಾಯ್ ನನಗೆ ಸಲಹೆ ನೀಡಿದ್ದರು. ಆಟವನ್ನು ಆನಂದಿಸಬೇಕು. ನಮ್ಮ ನೈಜ ಆಟವನ್ನು ಆಡಬೇಕು. ಅದನ್ನು ಸರಿಯಾಗಿ ನಿಭಾಯಿಸಿದ್ರೆ ನಿನ್ನಿಂದ ಶ್ರೇಷ್ಠ ಪ್ರದರ್ಶನ ಬರುತ್ತೆ ಎಂದು ಧೋನಿ ಹೇಳಿದ್ದ ಮಾತನ್ನು ಗೌತಮ್ ಸದಾ ನೆನಪಿಸಿಕೊಳ್ಳುತ್ತಾರೆ.
ಇನ್ನು ಟೀಮ್ ಇಂಡಿಯಾಗೆ ಆಯ್ಕೆಯಾಗೋದು ಕನಸು. ಆ ಕನಸು ನನಸಾದಾಗ ಆಗುವ ಖುಷಿಯನ್ನು ಹೇಳಿಕೊಳ್ಳಲು ಸಾಧ್ಯವಿಲ್ಲ. ಅದ್ರಲ್ಲೂ ರಾಹುಲ್ ದ್ರಾವಿಡ್ ಸಾರ್, ಮಾರ್ಗದರ್ಶನದಲ್ಲಿ ಆಡುವುದು ನನಗೆ ಅಷ್ಟೇನೂ ಕಷ್ಟವೇನೂ ಆಗಲ್ಲ. ಭಾರತ ಎ ತಂಡದಲ್ಲಿರುವಾಗ ಅವರ ಮಾರ್ಗದರ್ಶನದಲ್ಲೇ ಆಡಿದ್ದೇನೆ. ಅವರ ಜೊತೆ ಇರುವುದೇ ದೊಡ್ಡ ಅನುಭವ. ಪಂದ್ಯಕ್ಕೆ ಯಾವ ರೀತಿ ತಯಾರಿ ನಡೆಸಬೇಕು ಎಂಬುದನ್ನು ಅವರು ತುಂಬಾ ಚೆನ್ನಾಗಿ ಹೇಳಿಕೊಡುತ್ತಾರೆ. ಹಾಗೇ ಅವಕಾಶವನ್ನು ನೀಡುತ್ತಾರೆ ಅನ್ನೋದು ಗೌತಮ್ ಅವರ ಅಭಿಮತ.

ಒಟ್ಟಾರೆ, ಕರ್ನಾಟಕದಿಂದ ಮತ್ತೊಬ್ಬ ಕ್ರಿಕೆಟಿಗ ಟೀಮ್ ಇಂಡಿಯಾಗೆ ಎಂಟ್ರಿಯಾಗುತ್ತಿದ್ದಾರೆ. ಕೆ.ಎಲ್. ರಾಹುಲ್, ಮನೀಷ್ ಪಾಂಡೆ, ಮಯಾಂಕ್ ಅಗರ್ ವಾಲ್, ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾದ ಕ್ಯಾಪ್ ಧರಿಸಿದ್ದಾರೆ. ಇವರ ಜೊತೆಗೆ ಕೆ.ಗೌತಮ್, ದೇವ್ ದತ್ ಪಡಿಕ್ಕಲ್, ಬೀದರ್ ಮೂಲದ ವರುಣ್ ಚಕ್ರವರ್ತಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಟ್ರಕೊಡುವ ದಿನವನ್ನು ಎದುರು ನೋಡುತ್ತಿದ್ದಾರೆ.

Tags: cskdevdatt padikkalErapalli PrasannaindiakanrnatakaKrishnappa GowthamKSCAManish PandeyMayank Agarwalmumbai indianspunjab kingsr.ashwinRahul Dravidrajastan royalsShikhar Dhawansrilankateam indiaVarun Chakravarthy
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram