ಮಂಡ್ಯ : ಕೆಆರ್ ಎಸ್ ಡ್ಯಾಂ ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆ ಇಂದು ಕೆಆರ್‍ಎಸ್ ಅಣೆಕಟ್ಟೆಯಲ್ಲಿ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಣೆ ಮಾಡಿದ್ದಾರೆ. ಈ ಮೂಲಕ ಅತಿ ಹೆಚ್ಚು ಬಾರಿ ಕಾವೇರಿಗೆ ಬಾಗಿನ ಅರ್ಪಿಸಿ ಸಿಎಂ ಎಂಬ ದಾಖಲೆ ಬರೆದಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರು ಐದು ಬಾರಿ ಕೆಆರ್ ಎಸ್ ಗೆ ಬಾಗಿನ ಅರ್ಪಿಸಿದ್ದಾರೆ.
ಮಧ್ಯಾಹ್ನ 12.05ರ ಅಭಿಜಿನ್ ಲಗ್ನದಲ್ಲಿ ಸಿಎಂ ಬಾಗಿನ ಸಮರ್ಪಣೆ ಮಾಡಿದರು. ಅರ್ಚಕ ಡಾ.ಭಾನುಪ್ರಕಾಶ್ ನೇತೃತ್ವದಲ್ಲಿ ಬಾಗಿನ ಅರ್ಪಣೆಯ ಪೂಜಾ ಕೈಂಕರ್ಯ ನಡೆಯಿತು. ಬಾಗಿನ ಅರ್ಪಣೆ ಹಿನ್ನೆಲೆ ಡ್ಯಾಂಗೆ ತಳಿರು ತೋರಣದಿಂದ ಸಿಂಗಾರ ಮಾಡಲಾಗಿದೆ.
ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಮೂಲಕ ಕೆಆರ್‍ಎಸ್‍ಗೆ ಆಗಮಿಸಿದರು. ಈ ವೇಳೆ, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.