ಅಜಾನ್ ವಿಚಾರದಲ್ಲಿ ಸ್ಪರ್ಧೆ ಬೇಡ ಮುಸ್ಲಿಂರನ್ನ ಒಪ್ಪಿಸಿ ಶಬ್ದ ಕಡಿಮೆ ಮಾಡಿ – ಕೆ ಎಸ್ ಈಶ್ವರಪ್ಪ
ಮಸೀದಿಗಳಲ್ಲಿ ಆಜಾನ್ ವೇಳೆ ಶಬ್ದ ಮಾಲಿನ್ಯವಾಗುತ್ತದೆ ಎಂದು ನಾವು ಅವರೊಂದಿಗೆ ಸ್ಪರ್ಧಿಸಲು ಹೋಗಬಾರದು. ಮುಸ್ಲಿಮರನ್ನು ಒಪ್ಪಿಸಿ ಶಬ್ದ ಕಡಿಮೆ ಮಾಡಿಸಬೇಕಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಉತ್ತರ ಕನ್ನಡ ಜಿಲ್ಲೆ ಅಂಕೋಲ ತಾಲ್ಲೂಕಿನ ಮಾದನಗೇರಿ ಗ್ರಾಮದಲ್ಲಿ ಹೇಳಿದರು.
ಎಲ್ಲರೂ ಧ್ವನಿವರ್ಧಕ ಬಳಸುತ್ತಾ ಹೋದರೆ ಸಮಸ್ಯೆ ಹೆಚ್ಚಾಗುತ್ತದೆ. ಇದು ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತದೆ. ಮಂದಿರ, ಮಸೀದಿ, ಚರ್ಚ್‌ಗಳಲ್ಲಿ ಜೋರಾಗಿ ಮೈಕ್ ಹಾಕಿದರೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತದೆ. ಹೀಗಾಗಿ ಮುಸ್ಲಿಮರು ಈ ಬಗ್ಗೆ ಚಿಂತನೆ ಮಾಡಬೇಕಾಗಿದೆ. ಮಸೀದಿಯೊಳಗೆ ಶಬ್ದ ಕೇಳುವಂತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮಸೀದಿಗಳಲ್ಲಿ ಧ್ವನಿವರ್ಧಕ ಬ್ಯಾನ್ ಮಾಡುವಂತೆ ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ನೀಡಿರುವ ಹೇಳಿಕೆಗೆ ಕರ್ನಾಟಕದ ಶ್ರೀರಾಮಸೇನೆ ಕೂಡಾ ದನಿಗೂಡಿಸಿದೆ. ಕುರಿತು ಪ್ರತಿಕ್ರಿಯಿಸಿದ ಅವರು, ಮುಂಚೆಯಿಂದಲೂ ಬಂದಂತಹ ಪದ್ಧತಿಯ ಮೂಲಕ ದೇವರ ಪ್ರಾರ್ಥನೆ ಮಾಡುತ್ತೇವೆ ಎನ್ನುವುದು ಮುಸ್ಲಿಮರ ವಾದ.
ಅವರು ಮಸೀದಿಗಳಲ್ಲಿ ಜೋರಾಗಿ ಕೂಗ್ತಾರೆ, ಅದಕ್ಕೆ ಹನುಮಾನ್ ಚಾಲೀಸ ಮೈಕಿನಲ್ಲಿ ಹಾಕ್ಬೇಕು ಅಂತಾ ನಾವು ಸ್ಪರ್ಧೆ ಮಾಡಬಾರದು. ಮಸೀದಿಯಲ್ಲಿ ಕೂಗುವುದರಿಂದ ವಿದ್ಯಾರ್ಥಿಗಳಿಗೆ, ವೃದ್ಧರಿಗೆ ತೊಂದರೆಯಾಗುತ್ತಿದೆ ಎನ್ನುವ ಮಾತು ಸಹ ಬಹಳ ವರ್ಷಗಳಿಂದ ಕೇಳಿಬರುತ್ತಿದೆ. ಮುಸ್ಲಿಂ ಸಮುದಾಯದ ಮುಖಂಡರೇ ಈ ಬಗ್ಗೆ ಚಿಂತನೆ ಮಾಡಿ ನಿರ್ಧರಿಸಬೇಕು ಎಂದು ಸಲಹೆ ಮಾಡಿದರು.








