k s eshwarappa ನಾನು ಹಲಾಲ್ ಕಟ್ ಮಾಂಸ ತಿಂದಿಲ್ಲ
ಶಿವಮೊಗ್ಗ : ರಾಜ್ಯದಲ್ಲಿ ಮತ್ತೆ ಧರ್ಮದ ದಂಗಲ್ ಶುರುವಾಗಿದ್ದು, ಹಲಾಲ್ ಮುಕ್ತ ದೀಪಾವಳಿಗೆ ಹಿಂದೂಪರ ಸಂಘಟನೆಗಳು ಕರೆಕೊಟ್ಟಿವೆ.
ಈ ಬಗ್ಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ನಾನು ನನ್ನ ಜೀವನದಲ್ಲಿ ಹಲಾಲ್ ಕಟ್ ಮಾಂಸ ತಿಂದಿಲ್ಲ, ಮುಂದೆಯೂ ತಿನ್ನೋದಿಲ್ಲ ಎಂದಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ನನಗೆ ಹಲಾಲ್ ಕಟ್ಟೋ, ಹಲ್ಕ ಕಟ್ಟೋ ಗೊತ್ತಿಲ್ಲ.
ನಾವು ಏಕೆ ನಮ್ಮ ದೇವರಿಗೆ ಹಲಾಲ್ ಕಟ್ ಮಾಂಸ ಎಡೆ ಇಡೋಣ ಎಂದು ಕರೆಕೊಟ್ಟಿದ್ದಾರೆ.
ಮುಂದುವರೆದು ಮಾತನಾಡಿದ ಈಶ್ವರಪ್ಪ, ಹಲಾಲ್ ನಿಂದ ಸಂಗ್ರಹವಾದ ಹಣವನ್ನು ಭಯೋತ್ಸಾದಕ ಕೃತ್ಯಕ್ಕೆ ಬಾಂಬ್ ಹಾಕುವುದಕ್ಕೆ ಬಳಸುತ್ತಾರೆ.
ಇದೇ ಕಾರಣಕ್ಕಾಗಿ ನಾವು ಯುಗಾದಿ ಹಬ್ಬದ ಸಂದರ್ಭದಲ್ಲಿ ಈ ಅಭಿಯಾನ ಆರಂಭವಾಗಿತ್ತು.
ಈಗ ದೀಪಾವಳ ಹಬ್ಬದಲ್ಲೂ ಈ ಅಭಿಯಾನ ಮತ್ತೆ ಗರಿಗೆದರಿದೆ ಎಂದಿದ್ದಾರೆ.