KSRTC – BMTC : ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು – ಮಂಗಳವಾರ ಬಸ್ ಸಂಚಾರದಲ್ಲಿ ವ್ಯತ್ಯಯ…
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನ ಈಡೇರಿಸಲು ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ.
ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು 6 ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಿಯಮಬದ್ಧವಾಗಿ 2020 ಮಾರ್ಚ್‌ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು. ಹೀಗಾಗಿ ನಿಗಮಗಳ ನಿರ್ಧಾರಕ್ಕೆ ಕೆಎಸ್ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1,20,000 ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದಾರೆ. ಜತೆಗೆ ಪುನಃ ಬೀದಿಗಿಳಿದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಸಿದ್ಧರಾಗಿದ್ದು, ಜನವರಿ 24ರಂದು ಸಾರಿಗೆ ನೌಕರರು ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಹೀಗಾಗಿ ಮಂಗಳವಾರ ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ.
KSRTC – BMTC : Transport employees on protest – Variation in bus service on Tuesday…