ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ಬೆಂಗಳೂರು: ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಅರಮನೆ ರಸ್ತೆಯಲ್ಲಿ ನಡೆದಿದೆ.
ಲಕ್ಷ್ಮೀ ದೇವಿ (50) ಮೃತ ದುರ್ದೈವಿ. ದ್ವಿಚಕ್ರಕ್ಕೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿ ಹೊಡೆದೆ ಪರಿಣಾಮ ಮಹಿಳೆಯ ರುಂಡ ಮುಂಡ ಬೇರೆ ಬೇರೆಯಾಗಿವೆ. ಮಹಿಳೆ ಹೆಲ್ಮೆಟ್ ಧರಿಸಿದ್ದರು, ಬಸ್ ಮಹಿಳೆ ಮೇಲೆ ಹರಿದ ಪರಿಣಾಮ ದುರ್ಘಟನೆ ಸಂಭಂವಿಸಿದೆ.
ಲಕ್ಷ್ಮೀ ಅವರು ತಮ್ಮ ಸಹೋದರನ ಜೊತೆ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಬಸ್ ಪುಟ್ಟಪರ್ತಿಯಿಂದ ಬೆಂಗಳೂರಿಗೆ ಬರುತ್ತಿತ್ತು. ಬಸ್ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಕೆಳಗೆ ಬಿದ್ದಿದ್ದಾರೆ. ನಂತರ ತಲೆಯ ಮೇಲೆ ಬಸ್ ಹರಿದು ಹೋದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಅವಘಡಕ್ಕೆ ಚಾಲಕನ ನಿರ್ಲಕ್ಷ್ಯತನವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಸದಾಶಿವನಗರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








