KSRTC ಬಸ್ ಮತ್ತು ಬೈಕ್ ನಡುವೆ ಅಪಘಾತ | 2 ಸಾವು
ತುಮಕೂರು: ಕೆ.ಎಸ್.ಆರ್.ಟಿ.ಸಿ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಗಂಡ ಮತ್ತು ಹೆಂಡತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೆರಗಳಪಾಳ್ಯಯ ಸಿಮೆಂಟ್ ಇಟ್ಟಿಗೆ ಕಾರ್ಖಾನೆ ಬಳಿ ನಡೆದಿದೆ.
ಗೊಂದಿಹಳ್ಳಿ ಮೂಲದ ನಿವಾಸಿಗಳಾದ ಗಂಡ ಸಾಂಬಶಿವಪ್ಪ(70) ಮತ್ತು ಹೆಂಡತಿ ಮೃತ ದುರ್ದೈವಿಗಳು. ಸ್ಥಳಕ್ಕೆ ಮಧುಗಿರಿ ಪೊಲೀಸ್ ರು ಆಗಮಿಸಿದ್ದು, ಶವಗಳನ್ನು ತಾಲೂಕು ಆಸ್ಪತ್ರೆಗೆ ಕಳುಹಿಸಿದ್ದಾರೆ.
ಮಧುಗಿರಿಯಿಂದ ಬೆಂಗಳೂರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಒಂದು ಹೋಗುತ್ತಿತ್ತು. ಮಾರ್ಗ ಮಧ್ಯೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಡ ಸಾಂಬಶಿವಪ್ಪ ಮತ್ತು ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಮಧುಗಿರಿ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಧುಗಿರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.