ನಾಳೆ ಬೆಳಗ್ಗೆ 6 ಗಂಟೆಯಿಂದ ಕೆಎಸ್‍ಆರ್ ಟಿಸಿ ಬಸ್ ಸಂಚಾರ ಆರಂಭ
ಬೆಂಗಳೂರು : ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಕೆಎಸ್‍ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ.
ಸರ್ಕಾರ ನಿನ್ನೆ ಅನ್ ಲಾಕ್ ಮಾರ್ಗಸೂಚಿ ಪ್ರಕಟ ಮಾಡಿದ್ದು, ನಾಳೆಯಿಂದ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಶೇ. 50 ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
ಚಾಲಕರು ಮತ್ತು ನಿರ್ವಾಹಕರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ರಿಪೋರ್ಟ್ ತರಬೇಕು. ಜೊತೆಗೆ ಕೊರೊನಾ ಲಸಿಕೆ ಮೊದಲ ಅಥವಾ ಎರಡನೇ ಡೋಸ್ ಪಡೆದಿರಬೇಕು. ಮಾಸ್ಕ್, ದೈಹಿಕ ಅಂತರ ಕಡ್ಡಾಯವಾಗಿದೆ.
ಇದಲ್ಲದೆ ಇದರ ಬೆನ್ನಲ್ಲೇ ನಾಳೆ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರು ಬಿಎಂಆರ್‍ಸಿಎಲ್ , ನಾಳೆ ಬೆಳಗ್ಗೆ 7 ರಿಂದ ಮಧ್ಯಾಹ್ನ 11 ಗಂಟೆ ವರೆಗೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮಾತ್ರ ಮೆಟ್ರೋ ಸಂಚಾರ ಇರಲಿದೆ.
ಸ್ಮಾರ್ಟ್ ಕಾರ್ಡ್ ಹೊಂದಿದ ಪ್ರಯಾಣಿಕರಿಗೆ ಮಾತ್ರ ಸಂಚಾರಿಸಲು ಅವಕಾಶವಿದ್ದು, ಎಲ್ಲಾ ನಿಲ್ದಾಣದಲ್ಲೂ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಗೆ ವ್ಯವಸ್ಥೆ ಇರಲಿದೆ ಎಂದು ತಿಳಿಸಿದ್ದಾರೆ.









