KSRTC : ಮಾ. 24 ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ – ಸಂಚಾರದಲ್ಲಿ ವ್ಯತ್ಯಯ
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನೌಕರರು ಕರೆ ನೀಡಿದ್ದಾರೆ.
ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಚಂದ್ರಶೇಖರ್ ಅವರು ಈ ಕುರಿತು ಮಾತನಾಡಿದ್ದು, ಆರನೇ ವೇತನ ಆಯೋಗದ ಮಾದರಿಯಲ್ಲಿ ಸಾರಿಗೆ ನೌಕರರಿಗೆ ವೇತನ ನೀಡುವುದಾಗಿ 2021ರ ಏಪ್ರಿಲ್ ನಲ್ಲಿ ಸರ್ಕಾರ ಲಿಖಿತ ಭರವಸೆ ನೀಡಿತ್ತು. ಎರಡು ವರ್ಷ ಕಳೆದರೂ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬಜೆಟ್ ನಲ್ಲಿಯೂ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಉಲ್ಲೇಖಿಸಿಲ್ಲ. ಹೀಗಾಗಿ ಮುಷ್ಕರ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆಯ ಸದಸ್ಯರು ಶನಿವಾರ ಸಂಜೆ ಧರಣಿ ಸ್ಥಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸತತ ಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದರು ಕೂಡ 2023-24 ರ ರಾಜ್ಯ ಸರ್ಕಾರದ ಬಜೆಟ್ನಲ್ಲಿ ಸರ್ಕಾರ ಕೊಟ್ಟ ಲಿಖಿತ ಭರವಸೆ ಈಡೇರಿಸದ ಕಾರಣ ಅನಿವಾರ್ಯವಾಗಿ ಮಾ. 24 ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
KSRTC : Mon. Indefinite transport strike from 24 – Disruption in traffic