ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ (Kukke Subramanya) ಇಂದು ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ (ಹುತ್ತದ ಮಣ್ಣು) ನ್ನು ತೆಗೆಯಲಾಯಿತು. ಶ್ರೀ ದೇವಳದ ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕರು ವಿವಿಧ ವೈದಿಕ ವಿದಿವಿಧಾನಗಳೊಂದಿಗೆ ಮುಂಜಾನೆಯ ಶುಭ ಮುಹೂರ್ತದಲ್ಲಿ ಮೂಲಪ್ರಸಾದ ತೆಗೆದರು.
ಕ್ಷೇತ್ರದ ಮೂಲಸ್ಥಾನವಾದ ಗರ್ಭಗುಡಿಯಿಂದ ಈ ಮೃತ್ತಿಕಾ ಪ್ರಸಾದವನ್ನು ದೇವಳದ ಪ್ರಧಾನ ಅರ್ಚಕರು ತೆಗೆದು ಭಕ್ತಾಧಿಗಳಿಗೆ ನೀಡುವರು. ಇದು ಮೂಲಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯ ದೇವಳದ ಗರ್ಭಗುಡಿಯಿಂದ ತೆಗೆಯುವ ಕ್ಷೇತ್ರದ ಅತ್ಯಂತ ಪವಿತ್ರ ಮಹಾಪ್ರಸಾದ. ಯಾವುದೇ ದೇವಳದಲ್ಲಿ ಕೂಡಾ ಇಂತಹ ಪ್ರಸಾದ ದೊರಕುವುದಿಲ್ಲ. ಇದು ಕುಕ್ಕೆ ಕ್ಷೇತ್ರದಲ್ಲಿ ಮಾತ್ರ ಭಕ್ತರಿಗೆ ದೊರಕುವುದು ವಿಶೇಷ.
ಮೂಲಮೃತ್ತಿಕಾ ಪ್ರಸಾದವನ್ನು ವರ್ಷದಲ್ಲಿ ಒಂದೇ ಬಾರಿ ತೆಗೆಯಲಾಗುವುದು.ಈ ಮೃತ್ತಿಕಾ ಪ್ರಸಾದವು ರೋಗ ನಿರೋಧಕ, ಸಂತಾನ ಕಾರಕ ಮತ್ತು ಚರ್ಮರೋಗಗಳ ಪರಿಹಾರಕ್ಕೆ ದಿವ್ಯ ಔಷಧ. ಕ್ಷೇತ್ರದ ಈ ಮುಖ್ಯ ಪ್ರಸಾದವನ್ನು ಶುಭ ಕಾರ್ಯಗಳ ಒಳಿತಿಗೂ, ವ್ಯಾದಿಗಳ ನಿವಾರಣೆಗೂ ಭಕ್ತ ಜನರು ಕೊಂಡೊಯ್ಯುತ್ತಾರೆ.ಇದನ್ನು ತೀರ್ಥದಲ್ಲಿ ಸೇವಿಸುವುದರ ಮೂಲಕ ಅಥವಾ ಶರೀರಕ್ಕೆ ರಕ್ಷೆಯಾಗಿ ಕಟ್ಟಿಕೊಳ್ಳುವುದರ ಮೂಲಕ ಭಕ್ತಾಧಿಗಳು ಈ ಪ್ರಸಾದವನ್ನು ತಮ್ಮೊಳಗೆ ಧಾರಣೆ ಮಾಡುತ್ತಾರೆ. ಆದರೆ ಇದನ್ನು ಶರೀರದಲ್ಲಿ ಇರಿಸಿಕೊಂಡಾಗ ಅಪವಿತ್ರವಾಗದಂತೆ ತಡೆಯುವುದು ಮಾತ್ರ ಅತ್ಯಂತ ಪ್ರಮುಖವಾದ ಅಂಶವಾಗಿದೆ.
ಇದನ್ನೂ ಓದಿ: ಸಂಕಷ್ಟಹರ ಚತುರ್ಥಿಯಂದು ಶುಕ್ರನನ್ನು ಪೂಜಿಸುವುದರಿಂದ ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ
ಲೇಖಕರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ






