ಬೆಂಗಳೂರು: ಶಿರಾ ಮತ್ತು ಆರ್.ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಯಾರ ಜತೆಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ನಾಯಕರು ಈಗಾಗಲೇ ಮೈತ್ರಿ ಇಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ಹೀಗಾಗಿ ನಮ್ಮ ಪಕ್ಷದಿಂದ ಏಕಾಂಗಿ ಸ್ಪರ್ಧೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೆಚ್‍ಡಿಕೆ ತಿಳಿಸಿದ್ದಾರೆ.
ಆರ್.ಆರ್ ನಗರ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಹಾಗೂ ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುವುದು. ರಾಷ್ಟ್ರೀಯ ಪಕ್ಷಗಳನ್ನು ಮಣಿಸುವುದೇ ನಮ್ಮ ಗುರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಆರ್.ಆರ್ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಕುತಂತ್ರಕ್ಕೆ ಪ್ರತಿತಂತ್ರ ಸಿದ್ಧವಾಗಿದೆ. ಜೆಡಿಎಸ್‍ಗೆ ರಾಷ್ಟ್ರೀಯ ಪಕ್ಷಗಳನ್ನು ಎದುರಿಸುವುದು ಸವಾಲಿನ ಕೆಲಸವಾಗಿದೆ. ಹೀಗಿದ್ದರೂ ನಾವು ಬಿಜೆಪಿ ಮತ್ತು ಕಾಂಗ್ರೆಸ್‍ನ್ನು ಎದುರಿಸಲು ಸಿದ್ದವಾಗಿದ್ದೇವೆ ಎಂದಿದ್ದಾರೆ.
ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್
ರಾಜ್ಯದ ರಾಜಕೀಯ ವಲಯದಲ್ಲಿ ಈಗ ಕೈಗಡಿಯಾರದ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಕಾರ್ಟಿಯರ್ ವಾಚ್ ವಿಷಯದಲ್ಲಿ ಕಾಂಗ್ರೆಸ್ ಮತ್ತು BJP ನಡುವೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಈ...








