KRS ಬಾಗಿಲಿಗೆ ಸುಮಲತಾರನ್ನೇ ಮಲಗಿಸಬೇಕು: ಮಾಜಿ ಸಿಎಂ ಕುಮಾರಸ್ವಾಮಿ
ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ಅವರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಗೆ ಇಂತಹ ಸಂಸದೆ ಹಿಂದೆ ಬಂದಿಲ್ಲ. ಮುಂದೆಯೂ ಬರೋದಿಲ್ಲವೆಂದು ವ್ಯಂಗ್ಯವಾಡಿದ್ದಾರೆ.
ಇದೇ ವೇಲೆ ಕೆ ಆರ್ ಎಸ್ ನಲ್ಲಿ ನೀರು ಸೋರಿಕೆಯಾಗುತ್ತಿದೆ ಎಂಬ ಸಂಸದೆ ಸುಮಲತಾರ ಹೇಳಿಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಕೆ ಆರ್ ಎಸ್ ರಕ್ಷಣೆಯನ್ನು ಅವರೇ ಹೊತ್ತುಕೊಂಡಂತೆ ಕಾಣುತ್ತಿದೆ. ಹೀಗಾಗಿ ಕೆ ಆರ್ ಎಸ್ ಬಾಗಿಲಿಗೆ ಸುಮಲತಾರನ್ನೇ ಮಲಗಿಸಿದರೆ ಇದು ನಿಲ್ಲಬಹುದೇನೋ ಎಂದಿದ್ದಾರೆ.
ಏನೋ ಅನುಕಂಪದ ಅಲೆ ಮೇಲೆ ಅವರು ಮಂಡ್ಯ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಈಗಲಾದರೂ ಅವರು ಕೆಲಸ ಮಾಡದಿದ್ದರೆ ಮುಂದಿನ ಚುನಾವಣೆಯಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.