ಕೊಟ್ಟ ಮಾತಿನಂತೆ ಯುವತಿಗೆ ಉದ್ಯೋಗ ಕೊಡಿಸಿದ ಕುಮಾರಸ್ವಾಮಿ
ಬೆಂಗಳೂರು : ಎರಡು ದಿನಗಳ ಹಿಂದೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ನಾಗಮಂಗಲ ಪ್ರವಾಸ ಮುಗಿಸಿಕೊಂಡು ವಾಪಸ್ ಬೆಂಗಳೂರಿಗೆ ಆಗಮಿಸುವ ವೇಳೆ ಮಹಿಳೆಯೊಬ್ಬರ ಕಾರು ಅಡ್ಡಿಗಟ್ಟಿ ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದರು.
ಆಗ ಕುಮಾರಸ್ವಾಮಿ ಮಗಳನ್ನು ಬೆಂಗಳೂರಿನ ನಿವಾಸಕ್ಕೆ ಕಳುಹಿಸಿಕೊಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಇದೀಗ ಕೊಟ್ಟ ಮಾತಿನಂತೆ ಕುಮಾರಸ್ವಾಮಿ ಅಸಹಾಯಕ ಮಹಿಳೆಯ ಮಗಳಿಗೆ ಕೆಲಸ ಕೊಡಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ನಿನ್ನೆ ಮಹಿಳೆಯ ಮಗಳು ಕುಮಾರಸ್ವಾಮಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಈ ವೇಳೆ ಮೊಬೈಲ್ ಮೂಲಕ ಖಾಸಗಿ ಕಂಪನಿಯ ಜೊತೆ ಮಾತನಡಿದ ಕುಮಾರಸ್ವಾಮಿ, ಈ ಹುಡುಗಿ ಬಿಕಾಂ ಓದಿದ್ದು, ಕಂಪ್ಯೂಟರ್ ಅನುಭವಿದೆ. ಇವತ್ತೇ ಕಳುಹಿಸುತ್ತೇನೆ, ಉದ್ಯೋಗ ಕೊಡಿ ಅಂತ ಹೇಳಿದ್ರು. ಬಳಿಕ ಯುವತಿಗೆ 15 ರಿಂದ 20 ಸಾವಿರ ಸಂಬಳ ಕೊಡ್ತಾರೆ, ಇವತ್ತೇ ಹೋಗಿ ಕೆಲಸಕ್ಕೆ ಸೇರಿಕೊಮ್ಮ ಎಂದು ಸೂಚಿಸಿದರು.
ಹಿನ್ನೆಲೆ
ಜನವರಿ 24 ರಂದು ಖಾಸಗಿ ಕಾರ್ಯಕ್ರಮದ ನಿಮ್ಮಿತ್ತ ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ನೀಡಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಬರುವ ವೇಳೆ ಕಲ್ಲುದೇವನಹಳ್ಳಿ ಗ್ರಾಮದ ಮಹಿಳೆಯೊಬ್ಬರು ಕುಮಾರಸ್ವಾಮಿ ಕಾರನ್ನು ರಸ್ತೆಯಲ್ಲಿ ನಿಲ್ಲಿಸಿ ನನ್ನ ಪತಿ ಸತ್ತುಹೋಗಿದ್ದಾರೆ. ನನಗೆ 3 ಹೆಣ್ಣುಮಕ್ಕಳು. ಮೊದಲಿನವರಿಗೆ ಮದುವೆಯಾಗಿದೆ. ಮತ್ತಿಬ್ಬರ ಮದುವೆ ಮಾಡಬೇಕು ಸಹಾಯ ಮಾಡಿ. ನನ್ನ ಮಕ್ಕಳು ಉದ್ಯೋಗ ಹುಡುಕಿಕೊಂಡು ಬೆಂಗಳೂರಿಗೆ ಹೋಗಿದ್ದಾರೆ. ನಾನು ಈ ವಯಸ್ಸಿಯಲ್ಲಿ ದುಡಿದು ಬದುಕುತ್ತಿದ್ದೇನೆ, ನನ್ನ ಮಕ್ಕಳಿಗೆ ಕೆಲಸ ಕೊಡಿಸಿ ಎಂದು ಕುಮಾರಸ್ವಾಮಿ ಮುಂದೆ ಕಣ್ಣೀರಾಕಿದ್ದರು. ಈ ವೇಳೆ ಕುಮಾರಸ್ವಾಮಿ ನಿನ್ನ ಮಕ್ಕಳಿಗೆ ಕೆಲಸ ಕೊಡಿಸುವ ಜವಾಬ್ದಾರಿ ನನ್ನದು ಎಂದು ಭರವಸೆ ನೀಡಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel