ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮೂಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ” ಎಂದು ತಿರುಗೇಟು ನೀಡಿದರು.
ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರಕಾರದಿಂದ ಸೂಚನೆ ನೀಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿದ್ದಾರೆ. ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ. ನಾವು ದೆಹಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಜನಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ನನಗೆ ಈ ಆರೋಪದ ವಿಚಾರ ಗೊತ್ತೇ ಇಲ್ಲ. ನನಗೂ ಇದಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.