ಬೆಂಗಳೂರು: ಸಿಬಿಐ (CBI) ರಾಜ್ಯ ಪ್ರವೇಶಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ನಿರ್ಬಂಧ ಹೇರಿದ್ದರಿಂದಾಗಿ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ವ್ಯಂಗ್ಯವಾಡಿಡ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಕಿಡಿಕಾರಿದ್ದಾರೆ. ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು.
ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ (MUDA Scam) ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ. Karma hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಪ್ರಶ್ಸಿದ್ದಾರೆ.
ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಏನಂತೀರಿ? ಮುಡಾಸಿದ್ವಿಲಾಸ ಎಂದು ವಂಗ್ಯವಾಡಿದ್ದಾರೆ.