ಕೇಂದ್ರ ಸಚಿವ ಕುಮಾರಸ್ವಾಮಿ ಹಬ್ಬದ ದಿನವೂ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಕಾರಣವಾದ 14 ಸೈಟುಗಳನ್ನು ಸಿಎಂ ನೀಡಿದ್ದಕ್ಕೆ ಸಿಎಂ ವಿರುದ್ಧ ವ್ಯಂಗ್ಯವಾಡಿದ್ದಾರೆ. ಪರಿಶಿಷ್ಟ ವರ್ಗಕ್ಕೆ ಸೇರಬೇಕಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಕುಖ್ಯಾತಿಯೂ ಸರ್ಕಾರದ ಮೇಲಿದೆ ಎಂದು ಗುಡುಗಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಹಿಂದಿನ ಸರ್ಕಾರವು ಕೋವಿಡ್ ಸಮಯದಲ್ಲಿ ನಡೆಸಿದ ಎನ್ನಲಾಗಿರುವ ಅವ್ಯವಹಾರಗಳನ್ನು ತನಿಖೆ ಮಾಡಿಸಲು ಸಿದ್ದರಾಮಯ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಖಂಡಿಸಿದರು. ಅಧಿಕಾರಕ್ಕೆ ಬಂದು ಒಂದೂವರೆ ವರ್ಷಗಳ ನಂತರ ತನಿಖೆ ನಡೆಸುವ ಅವಶ್ಯಕತೆ ಏನಿದೆ ಎಂದು ಗುಡುಗಿದ್ದಾರೆ.