ಸಿದ್ದರಾಮಯ್ಯನವರೇ ಸುಮ್ಮನೆ ನಮ್ಮನ್ನು ಕೆಣಕಬೇಡಿ : ಕುಮಾರಸ್ವಾಮಿ ವಾರ್ನಿಂಗ್

1 min read
KS Eshwarappa

ಸಿದ್ದರಾಮಯ್ಯನವರೇ ಸುಮ್ಮನೆ ನಮ್ಮನ್ನು ಕೆಣಕಬೇಡಿ : ಕುಮಾರಸ್ವಾಮಿ ವಾರ್ನಿಂಗ್

ಬೆಂಗಳೂರು : ಸಿದ್ದರಾಮಯ್ಯನವರೇ ಸುಮ್ಮನೆ ನಮ್ಮನ್ನು ಕೆಣಕಬೇಡಿ. ಜೆಡಿಎಸ್ ಚಿಕ್ಕ ಪಕ್ಷವಿರಬಹುದು, ಅದರ ಶಕ್ತಿಯನ್ನು ಕಡೆಗಣಿಸಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿಕಾರಿರುವ ಕುಮಾರಸ್ವಾಮಿ, ಸುಳ್ಳಿನ ಶೂರ, ಸಿದ್ದಕಲೆಯ ನಿಷ್ಣಾತ ಸಿದ್ದರಾಮಯ್ಯನವರಿಗೆ ರಾಜಕೀಯ ಶಕ್ತಿ ತುಂಬಿದವರು ಯಾರು? ನಾನು ಎಲ್ಲಿದ್ದೆ? ಎಲ್ಲಿಂದಾ ಬಂದೆ ಎಂದು ಸ್ವತಃ ಅವರೇ ಜನತೆಗೆ ಹೇಳಿದರೆ ಚೆನ್ನಾಗಿರುತ್ತದೆ. ಸತ್ಯಕ್ಕೆ ಬೆನ್ನು ತಿರುಗಿಸಿ ಸದಾ ಸುಳ್ಳಿನೆಡೆಗೆ ಮುಖ ಮಾಡಿ ನಿಲ್ಲುವ ‘ಸಿದ್ದಹಸ್ತರಿಗೆ’ ಜೆಡಿಎಸ್ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ.

ಯಾರೋ ಕಟ್ಟಿದ ಹುತ್ತಕ್ಕೆ ಹೊಕ್ಕು ರಾಜಕೀಯದ ಮರುಹುಟ್ಟು ಪಡೆದು ಉಂಡ ಮನೆಗೆ ಕನ್ನ ಕೊರೆವ ಗುಣ ಯಾರದ್ದು ಎಂಬುದನ್ನು ಜನ ಬಲ್ಲರು. ಪರಾವಲಂಬಿ ರಾಜಕಾರಣ ಅವರ ನೈಜಗುಣ.ನೇರ ರಾಜಕಾರಣ ಅವರ ರಕ್ತದಲ್ಲೇ ಇಲ್ಲ. ಜೆಡಿಎಸ್ ಅನ್ನ-ಗೊಬ್ಬರದಿಂದ ಬೆಳೆದು, ಈಗ ಕಾಂಗ್ರೆಸ್’ನ್ನೇ ನುಂಗುತ್ತಾ, ಆ ಪಕ್ಷದ ದಿಗ್ಗಜರನ್ನೇ ಬಲಿ ತೆಗೆದುಕೊಳ್ಳುತ್ತಿದ್ದಾರೆ.

Siddaramaiah saaksha tv

ಜೆಡಿಎಸ್ ಅವರಿವರ ಜತೆ ಹೋಗುವ ಪಕ್ಷ ಎಂದು ಸಿದ್ದರಾಮಯ್ಯ ಹೇಳಿರುವುದು ಅವರ ರಾಜಕೀಯ ಪ್ರಜ್ಞೆಯ ದಿವಾಳಿತನವಷ್ಟೆ. 2018ರಲ್ಲಿ ದೇವೇಗೌಡರ ಮನೆ ಬಾಗಿಲಿಗೆ ಬಂದವರು ಯಾರು? ನನ್ನನ್ನು ಮುಖ್ಯಮಂತ್ರಿ ಮಾಡಿ ಕೊನೆಗೆ ಕೈಕೊಟ್ಟು ಆ ಸರಕಾರದ ಪತನಕ್ಕೆ ‘ಕಾರಣಪುರುಷರು’ ಯಾರು? ಎಂಬುದು ಇಡೀ ರಾಜ್ಯಕ್ಕೆ ಗೊತ್ತಿರುವ ಸಂಗತಿ.

ದೇವೇಗೌಡರನ್ನು ಪ್ರಧಾನಿ ಮಾಡಿ, ಅವರಿಗೂ ಕೈಕೊಟ್ಟವರು ಯಾರು ಎಂಬುದು ಜನರಿಗೆ ಗೊತ್ತಿದೆ. ಸಿದ್ದರಾಮಯ್ಯನವರೇ ಸುಮ್ಮನೆ ನಮ್ಮನ್ನು ಕೆಣಕಬೇಡಿ. ಜೆಡಿಎಸ್ ಚಿಕ್ಕ ಪಕ್ಷವಿರಬಹುದು, ಅದರ ಶಕ್ತಿಯನ್ನು ಕಡೆಗಣಿಸಬೇಡಿ. ಕರ್ನಾಟಕದ ರಾಜಕಾರಣದಲ್ಲಿ ಪರಾವಲಂಬಿ ಸಸ್ಯ ನೀವು. ಪಕ್ಷಗಳನ್ನು ಒಡೆಯುವ ನಿಮ್ಮ ‘ಸಿದ್ದಕಲೆ’ ರಾಜ್ಯಕ್ಕೆ ಹೊಸತೇನಲ್ಲ ಎಂದು ಕುಟುಕಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd