ಬೆಂಗಳೂರು : ನಾನು ಯಾವುದೇ ದುರಾಲೋಚನೆ ಇಟ್ಟುಕೊಂಡು ಈ ಚುನಾವಣೆಗೆ ಬಂದಿಲ್ಲ. ನಾನು ನಿಮ್ಮ ಪ್ರೀತಿ ವಿಶ್ವಾಸವನ್ನು ಎಂದಿಗೂ ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ( Kusuma Hanumantarayappa ) ತಿಳಿಸಿದ್ದಾರೆ.
ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಜತೆ ಕುಸುಮಾ ಪ್ರಚಾರ ನಡೆಸಿದರು.
ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಕುಸುಮಾ, ನಾನು ಯಾವುದೇ ದುರಾಲೋಚನೆ ಇಟ್ಟುಕೊಂಡು ಈ ಚುನಾವಣೆಗೆ ಬಂದಿಲ್ಲ.
ನಿಮ್ಮ ಸೇವೆಗೆ ನಾನು ಬಂದಿದ್ದೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ನನ್ನ ಕೈಲಾದ ಪ್ರಯತ್ನ ಪಡುತ್ತೇನೆ. ನೀವು ಕೊಡುವ ಮತವನ್ನು ಮಾರಿಕೊಳ್ಳುವುದಿಲ್ಲ.
ಇದನ್ನೂ ಓದಿ : ಇದು ಧರ್ಮಕ್ಕೂ ಅಧರ್ಮಕ್ಕೂ ನಡೆಯುತ್ತಿರೋ ಚುನಾವಣೆ : ಡಿಕೆಶಿ
ನಿಮ್ಮ ನೋವು, ದುಃಖದಲ್ಲಿ ನಿಮ್ಮ ಮನೆ ಮಗಳಂತೆ ಜೊತೆಗಿರುತ್ತೇನೆ. ನಿಮ್ಮ ಮಗಳಿಗೆ ನೀಡುವ ಪ್ರೋತ್ಸಾಹವನ್ನೇ ನನಗೂ ನೀಡಿ ಎಂದರು.
ಮತ್ತಿಕೆರೆಯ ಚೌಡೇಶ್ವರಿ ನಗರದಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಕುಸುಮ ಹನುಮಂತರಾಯಪ್ಪ ಪ್ರಚಾರ ನಡೆಸಿದರು. ಈ ಸಂದರ್ಭ ಧಾರಾಕಾರ ಮಳೆ ಸುರಿಯಿತು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel