ಬೆಂಗಳೂರು : ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಸಂಸದ ಡಿ ಕೆ ಸುರೇಶ್ ಉಪಸ್ಥಿತಿಯಲ್ಲಿ ಕುಸುಮಾ ರವಿ ಕಾಂಗ್ರೆಸ್ ಸದಸ್ಯತ್ವ ಸ್ವೀಕರಿಸಿದರು.
ಇದನ್ನೂ ಓದಿ : ಸಚಿವ ಸ್ಥಾನಕ್ಕೆ ಸಿ.ಟಿ ರವಿ ರಾಜೀನಾಮೆ
ತಂದೆ ಹನುಮಂತರಾಯಪ್ಪ ಜೊತೆ ಕೆಪಿಸಿಸಿ ಕಚೇರಿಗೆ ಆಗಮಿಸಿದ ಕುಸುಮಾ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹೂಗುಚ್ಛ ನೀಡಿ ಬರಮಾಡಿಕೊಂಡರು.
ಕುಸುಮಾ ರವಿ ತಂದೆ, ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಸ್ಥಳದಲ್ಲಿದ್ದರೂ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ.
ಇದೇ ವೇಳೆ ಶಿರಾ ಕ್ಷೇತ್ರದ ಹಲ ಸ್ಥಳೀಯ ಜೆಡಿಎಸ್, ಬಿಜೆಪಿ ನಾಯಕರೂ ಕೂಡ ಕಾಂಗ್ರೆಸ್ ಗೆ ಸೇರ್ಪಡೆಯಾದರು.









