ಕವಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ವಿಧಿವಶ kuvempu saaksha tv
ಚಿಕ್ಕಮಗಳೂರು : ಕವಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 84 ವಯಸ್ಸಾಗಿತ್ತು.
ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿಯವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆ ರಾಜಲಕ್ಷ್ಮಿ ಮಲ್ಟಿ ಸ್ಟೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜೇಶ್ವರಿ ಅವರು ಕೊನೆಯುಸಿರೆಳೆದಿದ್ದಾರೆ.
ರಾಜೇಶ್ವರಿ ಅವರು ಪೂರ್ಣಚಂದ್ರ ತೇಜಸ್ವಿ ಅವರ ನಿಧನದ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಲ್ಲಿ ಒಬ್ಬರೇ ವಾಸವಾಗಿದ್ದರು. ಕಳೆದ ಕೆಲ ದಿನದ ಹಿಂದೆ ಬೆಂಗಳೂರಿಗೆ ಬಂದಿದ್ದರು.