ಮುಂಬಯಿ : ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿಯ ಕೊರತೆಯಾಗಿರುವ ಹಿನ್ನೆಲೆಯಲ್ಲಿ 24 ಗಂಟೆಗಳಲ್ಲಿ 12 ನವಜಾತ ಶಿಶು ಸೇರಿದಂತೆ 24 ಜನ ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಮಹಾರಾಷ್ಟ್ರದ (Maharashtra) ನಾದೆಂಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ (Nanded Hospital) ನಡೆದಿದೆ. ಹಾವು ಕಡಿತ ಸೇರಿದಂತೆ ವಿವಿಧ ಕಾಯಿಲೆಗಳಿಂದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದು 24 ಜನ ಸಾವನನ್ನಪ್ಪಿದ್ದಾರೆ. 6 ಗಂಡು ಹಾಗೂ 6 ಹೆಣ್ಣು ಶಿಶುಗಳು ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ.
ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯ ಡೀನ್ ಶಂಕರರಾವ್ ಚವ್ಹಾಣ ಈ ಕುರಿತು ಮಾಹಿತಿ ನಿಡಿದ್ದಾರೆ. ಔಷಧಿ ಹಾಗೂ ಸಿಬ್ಬಂದಿ ಕೊರತೆಯಿಂದಾಗಿ ಈ ಘಟನೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಸಾವು ಪ್ರಕರಣಗಳಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಸಂತಾಪ ಸೂಚಿಸಿದ್ದಾರೆ