ನೇಣ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯ್ತು ಮಹಿಳಾ ಸಬ್ ಇನ್ ಸ್ಪೆಕ್ಟರ್ ಮೃತದೇಹ..!
ಉತ್ತರ ಪ್ರದೇಶ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಸಬ್ ಇನ್ ಸ್ಪೆಕ್ಟರ್ ಒಬ್ಬರ ಶವ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಅನೂಪ್ ನಗರದ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಬ್ ಇನ್ ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 30 ವರ್ಷದ ಆರ್ಜೂ ಪವಾರ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ನೇಹ ನಿರಾಕರಿಸಿದ ಮಹಳಿಗೆ ಎಂಥಾ ಗತಿ ತಂದ ನೋಡಿ ಈ ಕಿರಾತಕ..!
ಇವರು 2015ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು.ಅನೂಪ್ ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಾಮಿಲಿ ಜಿಲ್ಲೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರ ಮೃತದೇಹವನ್ನ ನೋಡಿದ ಮನೆಯ ಮಾಲೀಕರು ಪೊಲೀಸರಿಗೆ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಈ ವೇಳೆ ಡೆತ್ ನೋಟ್ ಕೂಡ ಸಿಕ್ಕಿದೆ. ಆದ್ರೆ ಡೆತ್ ನೋಟ್ ನಲ್ಲಿ ಏನು ಬರೆಯಲಾಗಿದೆ ಎಂಬುವುದನ್ನ ಈ ವರೆಗೂ ಪೊಲೀಸರು ಬಹಿರಂಗ ಪಡೆಸಿಲ್ಲ.
ಅವಳಿ ಹೆಣ್ಣುಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಂದ ತಾಯಿ: ಕಾರಣ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








