ಕಾಂಗ್ರೆಸ್ ಗೆ ಮರ್ಮಾಘಾತ : ಬಿಜೆಪಿಗೆ ಲಖನ್ ಜಾರಕಿಹೊಳಿ
ಬೆಳಗಾವಿ : ಗೋಕಾಕ್ ವಿಧಾನಸಭಾ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದ ಕಾಂಗ್ರೆಸ್ ನಾಯಕ ಲಖನ್ ಜಾರಕಿಹೊಳಿ ಇದೀಗ ಕೈ ಬಿಡಲು ಮುಂದಾಗಿದ್ದಾರೆ. ಬೆಳಗಾವಿ ಉಪಚುನಾವಣೆಗೆ ಕೆಲವೇ ದಿನಗಳು ಮಾತ್ರ ಬಾಕಿ ಇದ್ದು, ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಹಂತದಲ್ಲಿ ಸತೀಶ್ ಜಾರಕಿಹೊಳಿ ಜೊತೆಗಿದ್ದ ಲಖನ್ ಜಾರಕಿಹೊಳಿ ಬಿಜೆಪಿಗೆ ಸೇರ್ಪಡೆ ಬಗ್ಗೆ ಮಾತನಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಅಂದಹಾಗೆ ಈ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರು ಪ್ರಮುಖ ಪಾತ್ರ ವಹಿಸಿಲಿದ್ದಾರೆ. ಸತೀಶ್ ಜಾರಕಿಹೊಳಿ ಗೆಲುವು ಸೋಲಿನಲ್ಲಿ ಸಹೋದರರ ಪಾತ್ರ ಮುಖ್ಯವಾಗಿರುತ್ತೆ ಎಂದು ಹೇಳಲಾಗುತ್ತಿದೆ. ಇದೀಗ ಸತೀಶ್ ಜಾರಕಿಹೊಳಿ ಜೊತೆಗಿದ್ದ ಲಖನ್ ಜಾರಕಿಹೊಳಿ ಬಿಜೆಪಿ ಪರ ವಾಲಿದ್ದು, ಸತೀಶ್ ಜಾರಕಿಹೊಳಿಗೆ ಸಂಕಷ್ಟ ತಂದಿದೆ.
ಇಂದು ಸಚಿವರಾದ ಜಗದೀಶ್ ಹೆಟ್ಟರ್, ಉಮೇಶ್ ಕತ್ತಿ, ಭೈರತಿ ಬಸವರಾಜ್, ಲಖನ್ ಜಾರಕಿಹೊಳಿಯನ್ನ ಭೇಟಿಯಾಗಿ, ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದಾರೆ ಎಂದು ತಿಳಿದುಬಂದಿದೆ. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಲಖನ್ ಜಾರಕಿಹೊಳಿ, ಉಪಚುನಾವಣೆಯಲ್ಲಿ ತಾವು ಬಿಜೆಪಿಗೆ ಬೆಂಬಲಿಸುತ್ತಿದ್ದು, ಪಕ್ಷ ಸೇರ್ಪಡೆ ಬಗ್ಗೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಜೊತೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದರು.