ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮಿನು ಮಂಜೂರು..
ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕೇಂದ್ರ ರಾಜ್ಯ ಸಚಿವ ಅಜಯ್ ಮಿಶ್ರಾ ‘ತೇನಿ’ ಅವರ ಪುತ್ರ ಆಶಿಶ್ ಮಿಶ್ರಾ ಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.
ಉತ್ತರ ಪ್ರದೇಶದಲ್ಲಿ ಚುನಾವಣೆಯ ಮೊದಲ ಹಂತದ ಮತದಾನ ದಿನವೇ ಜಮೀನು ತೀರ್ಪು ಬಂದಿದೆ. ದೇಶವನ್ನೆ ಬೆಚ್ಚಿ ಬೀಳಿಸಿದ ಘಟನೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಬೆಂಗಾವಲು ವಾಹನದ ಚಕ್ರ ಹರಿದು ನಾಲ್ವರು ಸಾವನ್ನಪ್ಪಿದ್ದರು. Lakhimpur Kheri violence: HC grants bail to Union minister’s son Ashish Mishra
ಆಶಿಶ್ ಅವರನ್ನು ಅಕ್ಟೋಬರ್ 9, 2021 ರಂದು ಲಖಿಂಪುರ ಖೇರಿ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಕೇಂದ್ರ ಸರ್ಕಾರ ತಂದಿದ್ದ 3 ಕೃಷಿ ಕಾನೂನುಗಳನ್ನ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ 4 ರೈತರು ಮತ್ತು ಪತ್ರಕರ್ತರು ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಅವರನ್ನ ವಿಶೇಷ ತನಿಖಾ ದಳ ಆರೋಪ ಪಟ್ಟಿಯಲ್ಲಿ ಪ್ರಮುಖ ಆರೋಪಿ ಎಂದು ಘೊಷಿಸಿತ್ತು.
ಈ ಭಾರಿಯ ಚುಣಾವಣೆಯಲ್ಲಿ ಬಿಜೆಪಿ ಪಕ್ಷ ಲಿಂಖಿಂಪುರ್ ಸಂಸದರನ್ನ ಚುನಾವಣೆಯ ಭಾಗವಾಗಿ ಮಾಡಿಕೊಂಡಿಲ್ಲ…. ಬಿಜೆಪಿ ಚಾನ್ಸ್ ತೆಗೆದುಕೊಳ್ಳುವ ಸಾಧ್ಯತೆ ಕಡಿಮೆ ಇದೆ.