ಲಖಿಂಪುರ ಖೇರಿ ಹಿಂಸಾಚಾರ : ಪ್ರಮುಖ ಆರೋಪಿ ಆಶಿಶ್ ಗೆ ಡೆಂಗ್ಯೂ..!
ಉತ್ತರಪ್ರದೇಶ : ಉತ್ತರಪ್ರದೇಶದ ಲಖೀಂಪುರದಲ್ಲಿ ಜೀಪ್ ಹಾರಿಸಿ ರೈತರ ಕೊಂದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಕೇಂದ್ರ ಸಚಿವರ ಪುತ್ರ ಆಶಿಶ್ ಗೆ ಡೆಂಗ್ಯೂ ಡೆಂಗ್ಯೂ ದೃಢಪಟ್ಟಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ಮಿಶ್ರಾ ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ವೈದ್ಯರ ಸಲಹೆಯಂತೆ ಲಖಿಂಪುರ್ ಜೈಲಿನ ಅಧಿಕಾರಿಗಳು ಆಶಿಶ್ ಮಿಶ್ರಾ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಎರಡು ಬಾರಿ ರಕ್ತದ ಮಾದರಿ ಪರೀಕ್ಷೆ ನಡೆಸಿದಾಗಲೂ ಡೆಂಗ್ಯೂ ಇರುವುದು ದೃಢಪಟ್ಟಿದೆ.
ಬೆಂಗಳೂರಲ್ಲಿ ಹೆಚ್ಚಿದ ಡ್ರಗ್ಸ್ ಪೆಡ್ಲರ್ಸ್ : ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಕಿಡಿ
ಭದ್ರತೆ ದೃಷ್ಟಿಯಿಂದ ಆಸ್ಪತ್ರೆ ಹೊರಗಡೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಜಿಲ್ಲಾಸ್ಪತ್ರೆಯು ಮೂರನೇ ಬಾರಿಯ ರಕ್ತದ ಮಾದರಿ ಪರೀಕ್ಷೆ ವರದಿಗಾಗಿ ಕಾಯುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಲಖಿಂಪುರ್ ಖೇರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಶೈಲೇಶ್ ಭಾತ್ನಗರ್, ಆಶಿಶ್ ಮಿಶ್ರಾ ಅವರ ರಕ್ತದ ಮಾದರಿಯನ್ನು 3ನೇ ಬಾರಿಗೆ ಪರೀಕ್ಷೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದೇವೆ. ವರದಿ ಆಧರಿಸಿ ಹೆಚ್ಚಿನ ಚಿಕಿತ್ಸೆ ಅಗತ್ಯತೆ ಕುರಿತು ತಜ್ಞರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.