ಬೆಳಗಾವಿ : ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ತಕ್ಷಣವೇ ಅಧಿಕಾರ ವಹಿಸಿಕೊಂಡು ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದ್ದಾರೆ.
ಯಾವುದೇ ವಿಷಯವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಸಾಮಥ್ರ್ಯ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗಿದೆ. ಇದನ್ನು ಗಮನಿಸಿ ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಲಾಗಿದೆ.
ಮಾಧ್ಯಮಗಳಲ್ಲಿ ನಮ್ಮ ವಿಚಾರ, ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ. ಹೊಸ ಸುದ್ದಿಗಳನ್ನು ಇಲ್ಲಿ ಓದಿ
ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮಥ್ರ್ಯವನ್ನು ಗಮನಿಸಿ ನಿಮ್ಮನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.