ಪಕ್ಷ ಬಯಸಿದ್ರೆ ಗೋಕಾಕ್ ನಿಂದ ನಾನೇ ಸ್ಪರ್ಧೆ ಮಾಡ್ತಿನಿ : ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಪಕ್ಷ ಬಯಸಿದ್ರೆ ಗೋಕಾಕ್ ನಿಂದ ನಾನೇ ಸ್ಪರ್ಧೆ ಮಾಡ್ತಿನಿ ಎಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇದೇ ವೇಳೆ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ರಮೇಶ ಜಾರಕಿಹೊಳಿ ಟಾರ್ಗೆಟ್ ಮಾಡಿರೋ ವಿಚಾರವಾಗಿ ಸಚಿವ ರಮೇಶ ಜಾರಕಿಹೊಳಿಗೆ ಟಾಂಗ್ ಕೊಟ್ಟ ಹೆಬ್ಬಾಳ್ಕರ್. ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023 ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ ಎಂದಿದ್ದಾರೆ.
ಇದೇ ವೇಳೆ ಗ್ರಾಮ ಪಂಚಾಯತಿ ಸದಸ್ಯರಿಗೆ ಬಿಜೆಪಿಯಿಂದ ಸನ್ಮಾನ ವಿಚಾರವಾಗಿ ಮಾತನಾಡಿದ ಅವರು ಸರ್ಕಾರವನ್ನು ಬಿಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ. ಎಂಎಲ್ಎ ಗಳನ್ನೆ ಎಸ್ಕೆಪ್ ಮಾಡಿದ್ದಾರೆ ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಕಾಲಾಯ ತಸ್ಮೈ ನಮಃ. ನಾನು ಗೋಕಾಕನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಪಕ್ಷ ಬಯಸಿದ್ರೆ ಗೋಕಾಕ್ ನಲ್ಲಿ ನಾನೇ ಅಭ್ಯರ್ಥಿ ಎಂದಿದ್ದಾರೆ.
ಗೋಕಾಕ್ ನಲ್ಲಿ ಸ್ಪರ್ಧೆ ಎಂದ ಲಕ್ಷ್ಮೀ ಹೆಬ್ಬಾಳ್ ಕರ್ ಗೆ , ಮೋಸ್ಟ್ ವೆಲ್ ಕಮ್ ಎಂದು ಟಾಂಗ್ ಕೊಟ್ಟ ‘ಬೆಳಗಾವಿ ಸಾಹುಕಾರ’
ಇನ್ನೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಮೋಸ್ಟ್ ವೆಲ್ ಕಮ್ ಎಂದು ರಮೇಶ ಜಾರಕಿಹೊಳಿ ಬೆಳಗಾವಿಯಲ್ಲಿ ಟಾಂಗ್ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕು ಇದೆ. ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕ ಅಲ್ಲ. ಯಾವ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇಲ್ಲವೋ ಅಲ್ಲಿ ಗೆಲ್ಲಿಸಬೇಕು. ಯಾಕೆ ಸರ್ಕಾರ ಪತನ ಆಗಿದೆ ಎನ್ನುವುದು ಅವರ ಗಾಡ್ ಫಾದರ್ ಗೆ ಕೇಳಿದ್ರೆ ಒಳ್ಳೆಯದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಯತ್ನಾಳ್ ಗೆ ಹೈಕಮಾಂಡ್ ನೋಟೀಸ್ ದೊಡ್ಡವರಿಗೆ ಬಿಟ್ಟ ವಿಚಾರ – ನಾವ್ಯಾಕೆ ಮಾತನಾಡಬೇಕು : ಬಿ ಸಿ ಪಾಟೀಲ್ ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








