Lalu Prasad Yadav : ಲಾಲು ಕಿಡ್ನಿ ಕಸಿ ಯಶಸ್ವಿ – ಪುತ್ರಿ ರೋಹಿಣಿಯಿಂದ ಕಿಡ್ನಿದಾನ…
ಬಿಹಾರ ಮಾಜಿ ಮುಖ್ಯಮಂತ್ರಿ ಮತ್ತು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಮೂತ್ರಪಿಂಡ ಕಸಿ ಚಿಕಿತ್ಸೆ ಸಿಂಗಾಪುರದಲ್ಲಿ ಯಶಸ್ವಿಯಾಗಿ ನಡೆದಿದೆ ಎಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ತಿಳಿಸಿದ್ದಾರೆ.
ಲಾಳು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು 74 ವರ್ಷದ ಲಾಲು ಪ್ರಸಾದ್ ಯಾದವ ಅವರಿಗೆ ಕಿಡ್ನಿ ದಾನ ಮಾಡಿದ್ದಾರೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾದ ನಂತರ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತೇಜಸ್ವಿ ಯಾದವ್ ಸಂತಸ ವ್ಯಕ್ತಪಡಿಸಿದ್ದಾರೆ.
“ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ತಂದೆಯನ್ನಆಪರೇಷನ್ ಥಿಯೇಟರ್ ನಿಂದ ಐಸಿಯು ಗೆ ಸ್ಥಳಾಂತರಸಲಾಗಿದೆ ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ. ತಮ್ಮ ತಂದೆ ಮತ್ತು ಸಹೋದರಿ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
Lalu Prasad Yadav : Lalu kidney transplant successful – daughter Rohini donates kidney…