ಲಾಲು ಪ್ರಸಾದ್ ಯಾದವ್ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ….
ಆರ್‌ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರನ್ನು ವಿಮಾನದ ಮೂಲಕ ನವದೆಹಲಿಗೆ ಕರೆದೊಯ್ದು ಏಮ್ಸ್‌ಗೆ ದಾಖಲಿಸಲು ನಿರ್ಧರಿಸಲಾಗಿದೆ. ಜುಲೈ 3 ರಂದು ಪಾಟ್ನಾದ ಅವರ ಮನೆಯಲ್ಲಿ ಮೆಟ್ಟಿಲು ಇಳಿಯುವಾಗ ಜಾರಿ ಬಿದ್ದದ್ದರಿಂದ ಅವರ ಬಲ ಭುಜದ ಮೂಳೆ ಮುರಿತಕ್ಕೊಳಗಾಗಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
“ಲಾಲು ಯಾದವ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅನೇಕ ವೈದ್ಯರಿಂದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ” ಎಂದು ಆರ್‌ಜೆಡಿ ಹಿರಿಯ ನಾಯಕರೊಬ್ಬರು ಸುದ್ದಿಸಂಸ್ಥೆಗಳಿಗೆ ತಿಳಿಸಿದ್ದಾರೆ. Lalu Prasad Yadav to be airlifted to AIIMS in New Delhi
ಜುಲೈ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಆರ್‌ಜೆಡಿ ವಕ್ತಾರ (ಬಿಹಾರ) ಚಿತ್ರರಂಜನ್ ಗಗನ್ ಪ್ರಕಾರ, “ಪ್ರಧಾನಿ ಮಂಗಳವಾರ ತೇಜಸ್ವಿ ಯಾದವ್ ಅವರೊಂದಿಗೆ ಮಾತನಾಡಿ ಆರ್‌ಜೆಡಿ ಮುಖ್ಯಸ್ಥರ ಆರೋಗ್ಯವನ್ನು ವಿಚಾರಿಸಿದ್ದಾರೆ. ಲಾಲು ಪ್ರಸಾದ್ ಯಾದವ್ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಧಾನಿ ಹಾರೈಸಿದ್ದಾರೆ.”