Lalu Yadav: ಕಿಡ್ನಿ ಕಸಿ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಿದ ಲಾಲು ಪ್ರಸಾದ್ ಯಾದವ್ ..
ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಯಾದವ್ ಕಿಡ್ನಿ ಕಸಿ ಚಿಕಿತ್ಸೆಗಾಗಿ ಶನಿವಾರ ತಮ್ಮ ಪುತ್ರಿ ರೋಹಿಣಿ ಮತ್ತು ಇತರ ಕುಟುಂಬ ಸದಸ್ಯರೊಂದಿಗೆ ಸಿಂಗಾಪುರಕ್ಕೆ ತೆರಳಿದ್ದಾರೆ.
ಕಿರಿಯ ಮಗ ತೇಜಸ್ವೀ ಯಾದವ್ ಸಹ ಲಾಲು ಜೊತೆ ಸಿಂಗಾಪುರಕ್ಕೆ ತರೆಳಿದ್ದಾರೆ. ಸಿಂಗಾಪುರದಲ್ಲಿ ವೈದ್ಯಕೀಯ ಪರೀಕ್ಷೆಗಳ ನಂತರ ಡಿಸೆಂಬರ್ ಮೊದಲ ವಾರದಲ್ಲಿ ಲಾಲು ಮೂತ್ರ ಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಆರ್ಜೆಡಿ ನಾಯಕ ತೇಜಸ್ವಿಯಾದವ್ ಹೇಳಿದ್ದಾರೆ.
ಜಾಮೀನಿನ ಮೇಲೆ ಜೈಲಿನಿಂದ ಹೊರಬಂರಿರುವ ಲಾಲು ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ. ಮಧುಮೇಹ, ಅಧಿಕ ರಕ್ತದೊತ್ತಡ, ಕಿಡ್ನಿ ಸಮಸ್ಯೆ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದ ಲಾಲು ಲಾಲು ಪ್ರಸಾದ್ ಯಾದವ್ ಅವರಿಗೆ ಪುತ್ರಿ ಮಿಸಾ ಭಾರತಿಗೆ ಕಿಡ್ನಿ ದಾನ ಮಾಡಲಿದ್ದು, ಕಸಿ ಮಾಡಿಸಿಕೊಳ್ಳಲು ಸಿಂಗಾಪುರಕ್ಕೆ ತೆರಳಲು ದೆಹಲಿ ಕೋರ್ಟ್ ಅನುಮತಿ ನೀಡಿದೆ.
ಡಿಸೆಂಬರ್ 5 ರಂದು ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. Lalu Yadav: Lalu Prasad Yadav went to Singapore for kidney transplant treatment..