ದಾವಣಗೆರೆ: ಜಿಲ್ಲೆಯ (Davanagere) ನ್ಯಾಮತಿ ತಾಲೂಕಿನ ಅರಣ್ಯ ವಲಯದಲ್ಲಿ ನಾಡಬಾಂಬ್ ಪತ್ತೆಯಾಗಿರುವ ಘಟನೆ ನಡೆದಿದೆ.
ನ್ಯಾಮತಿ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್ ಗಳನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿಯವರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಈ ನಾಡಬಾಂಬ್ ಗಳು ಪತ್ತೆಯಾಗಿವೆ.
ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇರಿಸಲಾಗಿತ್ತು. ಸಿಬ್ಬಂದಿ ಗಸ್ತು ತಿರುಗುತ್ತಾ ಆ ಸ್ಥಳಕ್ಕೆ ತೆರಳುತ್ತಿದ್ದಂತೆ 4 ಜನ ಆರೋಪಿಗಳು ಬೈಕ್ ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದಾಳಿ ನಡೆಸಿರುವ ಅರಣ್ಯ ಇಲಾಖೆ ಸಿಬ್ಬಂದಿ 2 ಬೈಕ್ ಹಾಗೂ 32 ನಾಡಬಾಂಬ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ








