ಹಾಸನ: ಜಮೀನಿನ ವಿವಾದದ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಾಫಿ ಗಿಡಗಳನ್ನು ನಾಶ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಬೇಲೂರಿನ ದೋಲನಮನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುರಂ ಎಂಬುವವರಿಗೆ ಸೇರಿದ ಕಾಫಿ ತೋಟವನ್ನು ಕಿಡಿಗೇಡಿಗಳು ನಾಶ ಮಾಡಿದ್ದಾರೆ. ಈ ಕಾಫಿ ಗಿಡಗಳನ್ನು ಹತ್ತಾರು ವರ್ಷಗಳಿಂದ ಬೆಳೆಯಲಾಗಿತ್ತು. ಆದರೆ, ನಾಶ ಮಾಡಿದ್ದಕ್ಕೆ ಕುಟುಂಬದವರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.
ಗ್ರಾಮದ ಮೊಸೀನ್, ಜಾಹಿದ್, ಅಫನಾನ್ ಶಾಕೀರ್ ಎಂಬವರು ಕಾಫಿ ತೋಟವನ್ನು ನಾಶ ಮಾಡಿದ್ದಾರೆ ಎಂದು ಕುರುಂ ಆರೋಪಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸ್ಥಳಕ್ಕ ಆರೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.