ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ Chamundi hill saaksha tv
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದೆ.
ಬೆಟ್ಟದ ನಂದಿ ಮಾರ್ಗದಲ್ಲಿ ಭೂ ಕುಸಿತವಾಗಿದ್ದು, ಭಕ್ತರು ಆತಂಕದಲ್ಲಿದ್ದಾರೆ.
ಅಂದಹಾಗೆ ಕೆಲ ದಿನಗಳ ಹಿಂದೆ ಭಾರಿ ಮಳೆಗೆ ನಂದಿ ಮಾರ್ಗದಲ್ಲಿ ಭೂಕುಸಿತವಾಗಿತ್ತು.
ಇದೀಗ ಅದೇ ಜಾಗದಲ್ಲಿ ಮತ್ತೆ ಭೂಮಿ ಕುಸಿದಿದೆ. ಹೀಗಾಗಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಸದ್ಯ ನಂದಿ ಮಾರ್ಗವನ್ನು ಬಂದ್ ಮಾಡಲಾಗಿದೆ.
ಇನ್ನು ನಂದಿ ಮಾರ್ಗದಲ್ಲಿ ಭೂಕುಸಿತವಾದ ಸ್ಥಳಕ್ಕೆ ಮೂರು ದಿನಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.