ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ, ದುರ್ಬಲ ವರ್ಗದವರಿಗೆ ಮೀಸಲಾತಿ narendra modi
ನವದೆಹಲಿ : ಒಬಿಸಿ, ಆರ್ಥಿಕ ದುರ್ಬಲ ವರ್ಗಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದ್ದು, ಅಖಿಲ ಭಾರತ ವೈದ್ಯಕೀಯ ಪ್ರವೇಶಾತಿಯಲ್ಲಿ ಮೀಸಲಾತಿ ಘೋಷಣೆ ಮಾಡಿದೆ.
ಅಖಿಲ ಭಾರತ ವೈದ್ಯಕೀಯ ಪ್ರವೇಶಾತಿಯಲ್ಲಿ ಒಬಿಸಿಗೆ ಶೇ 27 ರಷ್ಟು, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಘೋಷಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ.
ಈ ಮೀಸಲಾತಿಯಿಂದಾಗಿ ಪ್ರತಿವರ್ಷ ಎಂಬಿಬಿಎಸ್‍ನಲ್ಲಿ ಸುಮಾರು 1,500 ಒಬಿಸಿ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಪದವಿ 2,500 ಒಬಿಸಿ ವಿದ್ಯಾರ್ಥಿಗಳಿಗೆ ಪ್ರಯೋಜನ ಸಿಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದು ಪ್ರತಿವರ್ಷ ನಮ್ಮ ಸಾವಿರಾರು ಯುವಕರಿಗೆ ಉತ್ತಮ ಅವಕಾಶಗಳನ್ನು ಪಡೆಯಲು ಮತ್ತು ನಮ್ಮ ದೇಶದಲ್ಲಿ ಸಾಮಾಜಿಕ ನ್ಯಾಯದ ಹೊಸ ಮಾದರಿಯನ್ನು ಸೃಷ್ಟಿಸಲು ಅಪಾರ ಸಹಾಯ ಮಾಡುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.