ಬೆಂಗಳೂರು: ಹಾಸನ-ಮಂಗಳೂರು ( Hassana-Mangaluru) ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಶನಿವಾರ ಬೆಳಿಗ್ಗೆ ಬಾಳುಪೇಟೆ ಹಾಗೂ ಸಕಲೇಶಪುರ (Sakleshpura) ಮಧ್ಯೆ ಭೂಕುಸಿತವಾಗಿದ್ದು ಹಳಿ ಮೇಲೆ ಮಣ್ಣು ಬಿದ್ದಿದೆ. ಭೂಕುಸಿತದಿಂದಾಗಿ ಶುಕ್ರವಾರ ರಾತ್ರಿ ಹೊರಟ್ಟಿದ್ದ ಬೆಂಗಳೂರು ಕಣ್ಣೂರು ಎಕ್ಸ್ ಪ್ರೆಸ್ (Kannur Express) ಮತ್ತು ಬೆಂಗಳೂರು ಮುರುಡೇಶ್ವರ ಎಕ್ಸ್ ಪ್ರೆಸ್ (Murdeshwar Express) ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದ್ದು ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಆರು ಮಾರ್ಗವಾಗಿ ಸಂಚರಿಸುತ್ತಿದ್ದ 6 ರೈಲುಗಳು ನಿಂತಲ್ಲಿಯೇ ನಿಂತಿವೆ.
ಮಧ್ಯರಾತ್ರಿಯಿಂದ ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಪರ್ಯಾಯ ವಾಹನ ವ್ಯವಸ್ಥೆ ಮಾಡುವಂತೆ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ. ಭಾರೀ ಮಳೆಯಿಂದಾಗಿ ಪ್ರಯಾಮಿಕರು ಸಂಕಷ್ಟ ಪಡುವಂತಾಗಿದೆ.