ಹಿಮಾಚಲ ಪ್ರದೇಶದಲ್ಲಿ ಭೂಕುಸಿತ : ಸಾವಿನ ಸಂಖ್ಯೆ 13ಕ್ಕೆ ಏರಿಕೆ Himachal Pradesh
ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಸಂಭವಿಸಿರುವ ಭೂಕುಸಿತಕ್ಕೆ 13 ಮಂದಿ ಕೊನೆಯುಸಿರೆಳೆದಿದ್ದಾರೆ.
ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ.
ಅವಗಢದಲ್ಲಿ 13 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರು ಅವಶೇಷಗಳಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆಗಳಿವೆ.
ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ.
ಕಾರ್ಯಾಚರಣೆಯಲ್ಲಿ 13 ಮಂದಿಯನ್ನು ರಕ್ಷಿಸಲಾಗಿದೆ ಎಂದು ಐಟಿಬಿಪಿ ಉಪ ಕಮಾಂಡರ್ ಧಮೇರ್ಂದ್ರ ಠಾಕೂರ್ ತಿಳಿಸಿದ್ದಾರೆ.
ಇನ್ನು ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ನಿಜಕ್ಕೂ ದುಃಖಕರ ಸಂಗತಿ, ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪಗಳು.
ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಜೊತೆಗೆ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.