Heavy Rain | ಶಿರಾಡಿ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ ಬಂದ್
ಮಂಗಳೂರು :ನಿರಂತರ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಕಳೆದ ವರ್ಷದಂತೆ ಈ ವರ್ಷವೂ ರಸ್ತೆ ಬದಿ ಕುಸಿತ ಉಂಟಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಒಂದು ದಿನದ ಮಟ್ಟಿಗೆ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಅಂಹದಾಗೆ ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ರಸ್ತೆ ಕುಸಿದಿತ್ತು.
ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂ ಕುಸಿತವಾಗಿದೆ.
ಈ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.