ನೇಪಾಳದಲ್ಲಿ ಭೂ ಕುಸಿತ : ಆರು ಮಂದಿ ಸಾವು Nepal saaksha tv
ಕಠ್ಮಂಡು : ನೆರೆಯ ನೇಪಾಳದಲ್ಲಿ ಸುರಿಯುತ್ತಿರುವ ಮಳೆ ನಾನಾ ಅವಾಂತರಗಳನ್ನು ಸೃಷ್ಠಿಸಿದೆ.
ಬೆಂಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಪರ್ಬತ್ ಜಿಲ್ಲೆಯ ಹಲವೆಡೆ ಭೂ ಕುಸಿತ ಉಂಟಾಗಿದೆ.
ಇದರಿಂದಾಗಿ ಹಲವಾರು ಮಂದಿ ಮೃತಪಟ್ಟಿದ್ದು, ಕೆಲವರು ನಾಪತ್ತೆಯಾಗಿದ್ದಾರೆ.
ಇಂದು ಬೆಳಗ್ಗೆ ಪರ್ಬತ್ ಭೂ ಕುಸಿತ ಸಂಭವಿಸಿದ್ದು, ಕನಿಷ್ಠ ಆರು ಜನರು ಮೃತಪಟ್ಟಿದ್ದಾರೆ.
ಇಬ್ಬರು ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ಸಿಬ್ಬಂದಿ, ನಾಪತ್ತೆಯಾದವರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.