ಲಂಕಾ ಟಿ-20 ಸರಣಿ | ಇಂದಿನ ಪಂದ್ಯದಿಂದ ಧವನ್ ಔಟ್..?
ಬೆಂಗಳೂರು : ಶ್ರೀಲಂಕಾ ವಿರುದ್ಧದ 2 ನೇ ಟಿ 20 ಪಂದ್ಯದಿಂದ ಟೀಂ ಇಂಡಿಯಾದ ನಾಯಕ ಶಿಖರ್ ಧವನ್ ಹೊರಗುಳಿಯುವ ಸಾಧ್ಯತೆಗಳಿವೆ.
ಅಲ್ಲದೆ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್ ನಲ್ಲೂ ಭಾರಿ ಬದಲಾವಣೆಗಳು ಆಗುವ ಸಾಧ್ಯತೆ ಇದೆ.
ಯಾಕಂದ್ರೆ ಭಾರತದ ಆಲ್ ರೌಂಡರ್ ಕೃನಾಲ್ ಪಾಂಡ್ಯಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ನಿನ್ನೆ ನಡೆಯಬೇಕಿದ್ದ ಪಂದ್ಯವನ್ನು ಇಂದಿಗೆ ಮುಂದೂಡಲಾಗಿದೆ. ಜೊತೆಗೆ ಕೃನಾಲ್ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ 8 ಸದಸ್ಯರನ್ನು ಐಸೋಲೇಷನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಪೈಕಿ ತಂಡದ ನಾಯಕ ಶಿಖರ್ ಧವನ್ ಅವರನ್ನು ಕೂಡ ಐಸೋಲೇಷನ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಇಂದಿನ ಪಂದ್ಯದಿಂದ ದೂರ ಉಳಿಯುವ ಸಾಧ್ಯತೆಗಳಿವೆ.
ಧವನ್ ಮಾತ್ರವಲ್ಲದೆ ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಕೆ.ಗೌತಮ್, ಪೃಥ್ವಿ ಶಾ, ಸೂರ್ಯ ಕುಮಾರ್ ಯಾದವ್, ಮನೀಶ್ ಪಾಂಡೆ, ಯುಜುವೇಂದ್ರ ಚಹಲ್ ಕೂಡ ಐಸೋಲೆಶನ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಇಂದಿನ ಪಂದ್ಯದಲ್ಲಿ ಅನುಭವಿ ಆಟಗಾರ ಭುವನೇಶ್ವರ್ ಕುಮಾರ್ ತಂಡವನ್ನ ಮುನ್ನಡೆಸುವ ಸಾಧ್ಯತೆಗಳಿವೆ.