ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಗೆ ಉತ್ಸುಕರಾಗಿರುವವರ ಪಟ್ಟಿ ಬಹಳ ದೊಡ್ಡದಾಗಿದೆ ಎಂದು ಹೇಳಿದ್ದಾರೆ. ಪ್ರತಿ 15 ದಿನ ಅಥವಾ ತಿಂಗಳಿಗೆ ಪಕ್ಷದಲ್ಲಿ ಹೊಸ ಸದಸ್ಯರನ್ನು ಸೇರಿಸಿಕೊಳ್ಳುತ್ತಿದ್ದೇವೆ, ಎಂದು ಅವರು ಹೇಳಿದ್ದಾರೆ.
ಭಾಜಪ ಹಾಗೂ ಜೆಡಿಎಸ್ನ ಹಾಲಿ ಶಾಸಕರು ಕಾಂಗ್ರೆಸ್ಗೆ ಸೇರುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಸ್ಥಳೀಯ ನಾಯಕರು ಹಾಗೂ ಜನರ ಅಭಿಪ್ರಾಯ ಕೇಳಿದ ನಂತರವೇ ತೀರ್ಮಾನಿಸಲಾಗುವುದು. ಈ ವಿಚಾರದಲ್ಲಿ ಈಗ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ, ಎಂದು ಸ್ಪಷ್ಟಪಡಿಸಿದ್ದಾರೆ.








