ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1 ಲಕ್ಷಕ್ಕಿಂತ ಕಡಿಮೆ ಕರೊನಾ ಪ್ರಕರಣಗಳು ಪತ್ತೆ Saaksha Tv
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 83,876 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟ್ವೀಟ್ ಮಾಡಿದೆ.
ಇನ್ನೂ ದೇಶದಲ್ಲಿ ಕೊರೊನಾ ದಿನದ ಏರಿಕೆ ಪ್ರಮಾಣವು ಶೇ 7.25 ರಷ್ಟಿದ್ದು, ವಾರದ ಏರಿಕೆ ಪ್ರಮಾಣವು ಶೇ 9.18 ರಷ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕಡಿಮೆ ದಾಖಲಾಗಿದ್ದು ಸಂತಸದ ಸಂಗತಿ. ಸಕ್ರಿಯ ಪ್ರಕರಣಗಳು 11,08,938 ಲಕ್ಷ ಇದ್ದು, ಶೇ 2.62 ರಷ್ಟು ಪ್ರಮಾಣವಿದೆ ಎಂದು ಸಚಿವಾಲಯ ತಿಳಿಸಿದೆ.
ಅಲ್ಲದೇ ಕಳೆದ 24 ಗಂಟೆಯಲ್ಲಿ 1,99,054 ಜನರು ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣವು 96.12 ರಷ್ಟಿದೆ. ಕಳೆದ 24 ಗಂಟೆಯಲ್ಲಿ 895 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ.ಹಾಗೇ ಕಳೆದ 24 ಗಂಟೆಯಲ್ಲಿ 11,56,363 ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಇಲ್ಲಿಯವರೆಗೆ 169.63 ಕೋಟಿ ಕೊರೊನಾ ಲಸಿಕೆಗಳನ್ನು ನೀಡಲಾಗಿದೆ ಎಂದು ಹೇಳಿದೆ.









