ದಸರೆಯ ಜಂಬೂಸವಾರಿ ಮೆರವಣಿಗೆಗೆ ಕೊನೆ ಕ್ಷಣದ ಸಿದ್ಧತೆ Dasara’s Jambuswari saaksha tv
ಮೈಸೂರು : ಸಾಂಸ್ಕøತಿಕ ನಗರಿಯಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ದಸರೆಯ ಜಂಬೂಸವಾರಿ ಮೆರವಣಿಗೆಗೆ ಕೊನೆ ಕ್ಷಣದ ಸಿದ್ಧತೆಗಳು ನಡೆಯುತ್ತಿವೆ.
ಈಗಾಗಲೇ ಜಂಬೂಸವಾರಿಯಲ್ಲಿ ಭಾಗವಹಿಸುವ ಆನೆಗಳಿಗೆ ಸಿಂಗಾರ ಮಾಡಲಾಗಿದೆ. ಅಲ್ಲದೆ ಸಾಕಷ್ಟು ಭದ್ರತಾ ಕ್ರಮಗಳನ್ನು ಕೂಡ ತೆಗೆದುಕೊಳ್ಳಲಾಗಿದೆ.
ಈ ನಡುವೆ ಶ್ರೀಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಚಾಮುಂಡಿ ಬೆಟ್ಟದಿಂದ ಅಲಂಕೃತ ವಾಹನದಲ್ಲಿ ನಾದಸ್ವರ ವಿವಿಧ ಕಲಾತಂಡಗಳ ಜೊತೆಗೆ ಅರಮನೆಗೆ ತರಲಾಗಿದೆ.
ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಕೆಂಪು ಸೀರೆಯುಡಿಸಿ ಅಲಂಕಾರ ಮಾಡಲಾಗಿದೆ.

ಜಯಮಾತರ್ಂಡ ದ್ವಾರದ ಮೂಲಕ ಚಾಮುಂಡೇಶ್ವರಿ ಉತ್ಸವ ಮೂರ್ತಿ ಅರಮನೆ ಆವರಣ ಪ್ರವೇಶಿಸಿದೆ.
ಜಾನಪದ ಕಲಾತಂಡಗಳ ಸಮ್ಮುಖದಲ್ಲಿ ತಾಯಿ ಉತ್ಸವ ಮೂರ್ತಿಗೆ ಪೂರ್ಣ ಕುಂಭ ಸ್ವಾಗತ ಮಾಡಲಾಗಿದೆ.
ಅಂಬಾವಿಲಾಸ ಅರಮನೆ ದ್ವಾರ ಪ್ರವೇಶಿಸಿದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಸಾಂಪ್ರದಾಯ ಪೂಜೆ ವಿಧಿವಿಧಾನ ಮೂಲಕ ಉತ್ಸವ ಮೂರ್ತಿ ಬರ ಮಾಡಿಕೊಂಡ ಅರಮನೆ ಅರ್ಚಕರು ಉತ್ಸವ ಮೂರ್ತಿ ಅಂಬಾವಿಲಾಸ ಅರಮನೆಗೆ ಶಿಫ್ಟ್ ಮಾಡಲಾಗಿದೆ.








