ನವದೆಹಲಿ : ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಸೇರಿದಂತೆ ಗಣ್ಯರು ಅವರ ಸ್ಮರಣೆ ಮಾಡಿ, ಗೌರವ ಸಲ್ಲಿಸಿದ್ದಾರೆ.
ಈ ಸಂಬಂಧ ಮೋದಿ ಟ್ವೀಟ್ ಮಾಡಿ, ರಾಜೀವ್ ಗಾಂಧಿಯವರ ಜನ್ಮದಿನದ ನಿಮಿತ್ತ ಗೌರವ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಟೆಲಿಕಾಂ ಕ್ರಾಂತಿ, ಕಂಪ್ಯೂಟರೀಕರಣ, ಪಂಚಾಯತ್ ರಾಜ್, ಮತದಾನ ವಯಸ್ಸಿನ ಇಳಿಕೆ ಮೊದಲಾದ ಪುರೋಗಾಮಿ ಕಾರ್ಯಕ್ರಮಗಳ ಮೂಲಕ ಬಲಶಾಲಿಯಾದ ಆಧುನಿಕ ಭಾರತ ಕಟ್ಟಿದ, ನಮಗೆಲ್ಲ ಅಭಿವೃದ್ದಿಯ ದಾರಿ ತೋರಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರಿಗೆ ಹುಟ್ಟುಹಬ್ಬದ ದಿನದ ಗೌರವಪೂರ್ವಕ ನಮನಗಳು ಎಂದು ಬರೆದುಕೊಂಡಿದ್ದಾರೆ.
https://twitter.com/siddaramaiah/status/1296320256361693185?s=20
1944ರ ಆಗಸ್ಟ್ 20ರಂದು ಜನಿಸಿದ ರಾಜೀವ್ ಗಾಂಧಿ, 1984ರ ಅಕ್ಟೋಬರ್ ತಿಂಗಳಲ್ಲಿ ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು 1989ರ ಡಿಸೆಂಬರ್ 2ರ ತನಕ ಪ್ರಧಾನಿಯಾಗಿದ್ದರು. 1991 ಮೇ ತಿಂಗಳಲ್ಲಿ ತಮಿಳುನಾಡಿನ ಶ್ರೀಪೆರುಂಬದೂರ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ವೇಳೆ ಎಲ್ ಟಿಟಿಇ ಉಗ್ರರ ಆತ್ಮಹತ್ಯಾ ದಾಳಿಗೆ ಬಲಿಯಾದರು.









