ಪ್ರಮುಖ ರಾಜಕೀಯ ಸುದ್ದಿಗಳು : LATEST UPDATES

1 min read

ಪೂರ್ಣ ಸುದ್ದಿಗಳನ್ನು ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

ಕಾವೇರಿ ವಿಚಾರದಲ್ಲಿ ಬಿಸಿಮುಟ್ಟಿಸಬೇಕಾಗುತ್ತದೆ : ಕೇಂದ್ರಕ್ಕೆ ಹೆಚ್‍ಡಿಕೆ ವಾರ್ನಿಂಗ್

ಕಾವೇರಿ ವಿಚಾರದಲ್ಲಿ ಬಿಸಿಮುಟ್ಟಿಸಬೇಕಾಗುತ್ತದೆ : ಕೇಂದ್ರಕ್ಕೆ ಹೆಚ್‍ಡಿಕೆ ವಾರ್ನಿಂಗ್

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲೂ ಬಿಜೆಪಿಯದ್ದೇ ಸರ್ಕಾರವಿದೆ. ರಾಜ್ಯದಿಂದ ಬಿಜೆಪಿಗೆ ಅತ್ಯಧಿಕ ಸಂಸದರು ಸಿಕ್ಕಿದ್ದಾರೆ. ಹೀಗಾಗಿ ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಗೌರವಯುತವಾಗಿ, ನ್ಯಾಯಯುತವಾಗಿ ಕರ್ನಾಟಕದ ಹಿತ ಕಾಯಬೇಕು. ಇದಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಕಾವೇರಿ ವಿಚಾರದಲ್ಲಿ ಬಿಸಿಮುಟ್ಟಿಸಬೇಕಾಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ನೀಡಿ : ಬಿ.ಸಿ.ಪಾಟೀಲ್ ಮನವಿ

ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ನೀಡಿ : ಬಿ.ಸಿ.ಪಾಟೀಲ್ ಮನವಿ

ವಿಜಯಪುರ,ಫೆ.22:ಮುಖ್ಯಮಂತ್ರಿ ಸ್ಥಾನ ಗೌರವಯುತವಾದ ಸ್ಥಾನವಾಗಿದ್ದು,ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಎಲ್ಲರೂ ಗೌರವ ನೀಡಬೇಕೆಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ. ವಿಜಯಪುರ ತಾಲೂಕಿನ ಇಟ್ಟಂಗಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್,ಮೀಸಲಾತಿ ಸಭೆಯಲ್ಲಿ ಯತ್ನಾಳ್‌‌ಅಷ್ಟೇ ಭಾಗವಹಿಸಿಲ್ಲ. ಅವರು ಒಬ್ಬರೇ ಭಾಗವಹಿಸಿಲ್ಲ, ಬೇರೆ ಬೇರೆ ಸಮುದಾಯದವರೂ ಭಾಗವಹಿಸಿದ್ದಾರೆ. ಆದರೆ ಸಿಎಂ ಸ್ಥಾನ ಗೌರವಯುತ ಸ್ಥಾನ, ಅದಕ್ಕೆ ಗೌರವ ಕೊಡಬೇಕು. ಮೀಸಲಾತಿ ಸಿಗದಿದ್ದರೆ ಸಮುದಾಯದ ಶಾಸಕರು, ಸಚಿವರು ರಾಜೀನಾಮೆ ನೀಡಬೇಕು ಎಂದು ಯತ್ನಾಳ ಹೇಳಿಕೆ ನೀಡಿರುವುದು ಯತ್ನಾಳ್ ಅವರ ವೈಯಕ್ತಿಕ ಅಭಿಪ್ರಾಯ. ದೆಹಲಿಗೆ ಅವರನ್ನು ಏಕೆ ಕರೆಯಿಸಿಕೊಂಡರು ಎಂಬುದನ್ನು ಯತ್ನಾಳ್ ಅವರಿಗೆ ಕೇಳಬೇಕು.ಈ ಬಗ್ಗೆ ನನಗೇನು ಗೊತ್ತಿಲ್ಲ.ಅವರನ್ನು ದೆಹಲಿಗೆ ಕರೆದಿದ್ದರೆ ಅಲ್ಲಿಗೆ ಹೋದ ಬಳಿಕ ಅವರೇ ಪ್ರೆಸ್ ಮೀಟ್ ಮಾಡಿ ಹೇಳಬೇಕು.ರಾಜೀನಾಮೆ ಕೊಡುವವರು ಅದಕ್ಕೆ ಬದ್ಧರಾಗಿರಬೇಕು.ಯತ್ನಾಳ್ ಹೇಳಿದ ಮಾತ್ರಕ್ಕೆ ರಾಜೀನಾಮೆ ಕೊಡಬೇಕು ಎಂಬುದೇನಿಲ್ಲ ಎಂದು ಸೂಚ್ಯವಾಗಿ ಹೇಳಿದರು.

ಪಿಎಫ್ ಐ, ಎಸ್ ಡಿಪಿಐ ಬಿಜೆಪಿಯ ‘ಬಿ’ ಟೀಂ : ಸಿದ್ದರಾಮಯ್ಯ

ಪಿಎಫ್ ಐ, ಎಸ್ ಡಿಪಿಐ ಬಿಜೆಪಿಯ ‘ಬಿ’ ಟೀಂ : ಸಿದ್ದರಾಮಯ್ಯ

ಮಂಗಳೂರು : ಪಿಎಫ್ ಐ, ಎಸ್ ಡಿಪಿಐ ಬಿಜೆಪಿಯ ‘ಬಿ’ ಟೀಂ. ಅದನ್ನ ನಿಷೇಧ ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ ಐ ಬಿಜೆಪಿಯ ಬಿ ಟೀ ಆಗಿದೆ. ಅದು ರ್ಯಾಲಿ ಮಾಡಲು ಬಿಜೆಪಿಯವರು ಅನುಮತಿ ಕೊಟ್ಟಿದ್ದಾರೆ. ಪಿಎಫ್ ಐ, ಎಸ್ ಡಿಪಿಐ ರದ್ದು ಮಾಡಲು ಸಾಕಷ್ಟು ಸಾಕ್ಷ್ಯಗಳಿವೆ. ಕೂಡಲೇ ಪಿಎಫ್ ಐ,ಎಸ್ ಡಿಪಿಐ ರದ್ದು ಮಾಡಲಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಮೀಸಲಾತಿ ನೀಡದಿದ್ರೆ ರಾಜೀನಾಮೆ ನೀಡಿ ಅನ್ನೋದು ತಪ್ಪು : ಬಿ.ಸಿ.ಪಾಟೀಲ್

ಮೀಸಲಾತಿ ನೀಡದಿದ್ರೆ ರಾಜೀನಾಮೆ ನೀಡಿ ಅನ್ನೋದು ತಪ್ಪು : ಬಿ.ಸಿ.ಪಾಟೀಲ್

ವಿಜಯಪುರ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ನೀಡದಿದ್ದರೆ ಸಮಾಜದ ಸಚಿವರು, ವಿವಿಧ ನಿಗಮ, ಮಂಡಳಿ ನೇಮಕಗೊಂಡವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಡ ಹೇರುವುದು ಸರಿಯಲ್ಲ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿ ಮೀಸಲಾತಿ ಹೋರಾಟ ಸಮಾವೇಶದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುತ್ತಾ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ನೀಡದಿದ್ದರೆ ಸಮಾಜದ ಸಚಿವರು, ವಿವಿಧ ನಿಗಮ, ಮಂಡಳಿ ನೇಮಕಗೊಂಡವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕರೆಕೊಟ್ಟರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd