ಪ್ರಮುಖ ರಾಜಕೀಯ ಸುದ್ದಿಗಳು : LATEST UPDATES

1 min read

ಪ್ರಮುಖ ರಾಜಕೀಯ ಸುದ್ದಿಗಳು : LATEST UPDATES

ಕೆ.ಎಚ್ ಮುನಿಯಪ್ಪ ನೀರು ಹಾಕದೆ ಕತ್ತು ಕೊಯ್ಯುತ್ತಾನೆ : ವರ್ತೂರ್ ಪ್ರಕಾಶ್

ಕೆ.ಎಚ್ ಮುನಿಯಪ್ಪ ನೀರು ಹಾಕದೆ ಕತ್ತು ಕೊಯ್ಯುತ್ತಾನೆ : ವರ್ತೂರ್ ಪ್ರಕಾಶ್

ಕೋಲಾರ : ಕಾಂಗ್ರೆಸ್ ಪಕ್ಷಕ್ಕೆ ಸೇರುವುದ್ದಕ್ಕೆ ತುದಿಗಾಲಿನಲ್ಲಿ ನಿಂತಿರುವ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಅವರಿಗೆ ಮಾಜಿ ಸಂಸದ ಕೆ ಹೆಚ್ ಮುನಿಯಪ್ಪ ಅಡ್ಡಿಯಾಗಿದ್ದಾರೆ. ಈ ಹಿನ್ನೆಲೆ ವರ್ತೂರು ಪ್ರಕಾಶ್,ಸಾಬ್ರು ಕುರಿ ಕೊಯ್ಯುವಾಗ ಬಾಯಲ್ಲಿ ನೀರು ಹಾಕ್ತಾರೆ. ಆದರೆ ಕೆ.ಎಚ್ ಮುನಿಯಪ್ಪ ನೀರು ಹಾಕದೆ ಕತ್ತು ಕೊಯ್ಯುತ್ತಾನೆ ಅಂತಾ ಕೆ.ಎಚ್ ಮುನಿಯಪ್ಪ ವಿರುದ್ಧ ಏಕವಚನದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಕೋಲಾರದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಸಂಸದ ಕೆ ಹೆಚ್ ಮುನಿಯಪ್ಪ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಕೆ.ಹೆಚ್ ಮುನಿಯಪ್ಪನಿಗೆ ಬುದ್ಧಿ ಭ್ರಮಣೆ ಆಗಿದೆ. ಸಾಬ್ರು ಕುರಿ ಕೊಯ್ಯುವಾಗ ಬಾಯಲ್ಲಿ ನೀರು ಹಾಕ್ತಾರೆ. ಆದರೆ ಕೆ.ಎಚ್ ಮುನಿಯಪ್ಪ ನೀರು ಹಾಕದೆ ಕತ್ತು ಕೊಯ್ಯುತ್ತಾನೆ ಎಂದು ಗುಡುಗಿದರು.

ರಾಜಕೀಯ ಮಾಡಬೇಡಿ, ವಾಸ್ತವಾಂಶ ತಿಳಿಯಿರಿ : ಡಾ.ಕೆ.ಸುಧಾಕರ್

ರಾಜಕೀಯ ಮಾಡಬೇಡಿ, ವಾಸ್ತವಾಂಶ ತಿಳಿಯಿರಿ : ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿಯಲ್ಲಿ ಜಿಲೆಟಿನ್ ಸ್ಫೋಟ ಸಂಬಂಧ ಸ್ಥಳ ಪರಿಶೀಲನೆ ನಡೆಸಿದ್ದು, ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಸಚಿವರು ಟ್ವೀಟ್ ಮಾಡಿದ್ದಾರೆ. ಇದು ಅತ್ಯಂತ ವಿಷಾದಕರ ಘಟನೆಯಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗಿದೆ. ನಿಯಮಬಾಹಿರವಾಗಿ ಜಿಲೆಟಿನ್ ಸಂಗ್ರಹಿಸುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ ವೇಳೆ, ಅದನ್ನು ಬೇರೆಡೆ ಸಾಗಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಕೆಲ ನಾಯಕರು ಈ ವಾಸ್ತವಾಂಶ ಅರಿಯದೆ ಇಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

`ಸಿದ್ಧ’ವಾಯ್ತು ಮಾಸ್ಟರ್ ಪ್ಲಾನ್ : ಒಟ್ಟಾಗಿ ಪಕ್ಷ ಕಟ್ಟಲು ಮುಂದಾದ ಹುಲಿಯಾ-ಹೆಬ್ಬುಲಿ

`ಸಿದ್ಧ’ವಾಯ್ತು ಮಾಸ್ಟರ್ ಪ್ಲಾನ್ : ಒಟ್ಟಾಗಿ ಪಕ್ಷ ಕಟ್ಟಲು ಮುಂದಾದ ಹುಲಿಯಾ-ಹೆಬ್ಬುಲಿ

ಬೆಂಗಳೂರು : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂದು ಪಣತೊಟ್ಟಿರುವ ರಾಜ್ಯ ಕಾಂಗ್ರೆಸ್ ಪಕ್ಷ ಸಂಘಟನೆಯತ್ತ ಮುಖಮಾಡಿದೆ. ಕಳೆದ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋಲನುಭವಿಸಿದ್ದು, ಕಾರ್ಯಕರ್ತರು ಕುಗ್ಗಿ ಹೋಗಿದ್ದಾರೆ. ಹೀಗಾಗಿ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿ, ಪಕ್ಷದಲ್ಲಿ ಹೊಸ ಹುರುಪು ತುಂಬುವ ಉದ್ದೇಶದಿಂದ ರಾಜ್ಯಪ್ರವಾಸ ಕೈಗೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರು ಪ್ಲಾನ್ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಕಾರ್ಯಕರ್ತರು ಸದ್ಯ ಸಾಲು ಸಾಲು ಸೋಲುಗಳಿಂದ ಕಂಗಾಲಾಗಿದ್ದಾರೆ. ಅವರಲ್ಲಿ ಬೂಸ್ಟ್ ತುಂಬಬೇಕಾದ ಅನಿವಾರ್ಯತೆ ಇದೆ. ಇದೇ ನಿಟ್ಟಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಟ್ಟಾಗಿ ಪಕ್ಷ ಸಂಘಟನೆಗೆ ಮುಂದಾಗಲಿದ್ದಾರೆ.

ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ : ಡಾ.ಕೆ.ಸುಧಾಕರ್

ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ : ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ : ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ವಾಸ್ತವಾಂಶ ಅರಿಯದೆ ಈ ರೀತಿ ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ನಡೆದ ದುರಂತದ ಬಗ್ಗೆ ಕಾಂಗ್ರೆಸ್ ನಾಯಕರ ಅಭಿಪ್ರಾಯಗಳ ಬಗ್ಗೆ ಸರಣಿ ಟ್ವೀಟ್ ಗಳ ಮೂಲಕ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ವಾಸ್ತವಾಂಶ ಅರಿಯದೆ ಈ ರೀತಿ ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ. ನಿಯಮ ಬಾಹಿರವಾಗಿ ಜಿಲೆಟಿನ್ ಸಂಗ್ರಹಣೆ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ್ದ ಸಂದರ್ಭದಲ್ಲಿ ಅದನ್ನು ಬೇರೆಡೆ ಸಾಗಿಸುವಾಗ ಈ ದುರಂತ ಸಂಭವಿಸಿದೆ.

`ಆರ್.ಎಸ್.ಎಸ್ ದೇಶಭಕ್ತರ ಮಹಾ ಪಡೆ ಕಟ್ಟಿದ ಬೃಹತ್ ಸಂಘಟನೆ’

`ಆರ್.ಎಸ್.ಎಸ್ ದೇಶಭಕ್ತರ ಮಹಾ ಪಡೆ ಕಟ್ಟಿದ ಬೃಹತ್ ಸಂಘಟನೆ’

ಬೆಂಗಳೂರು : ಆರ್.ಎಸ್.ಎಸ್ ದೇಶಭಕ್ತರ ಮಹಾ ಪಡೆ ಕಟ್ಟಿದ ಒಂದು ನಿಷ್ಠಾವಂತ, ಸಮರ್ಪಿತ, ಬೃಹತ್ ಸಂಘಟನೆ ಎಂದು ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಸಿದ್ದರಾಮಯ್ಯನವರ ” ಆರ್ ಎಸ್ ಎಸ್ ಎನ್ನುವುದು ಜಾತಿ ಸಂಘಟನೆ. ಅವರು ತಾವು ದೇಶ ಪ್ರೇಮಿಗಳು ಅಂತಾರೆ. ಹಾಗಿದ್ದರೇ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆ ಏನು. ಆರ್ ಎಸ್ ಎಸ್ ನಿಂದ ಯಾರೂ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದವರಿಲ್ಲ ಎಂಬ ಟೀಕೆಗೆ ವಿಜಯೇಂದ್ರ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಟ್ವಿಟ್ಟರ್ ನಲ್ಲಿ ವಿಜಯೇಂದ್ರ, “ಮಾನ್ಯ ಸಿದ್ದರಾಮಯ್ಯನವರೇ, ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ಸುಭಾಷ್ ಚಂದ್ರ ಬೋಸ್, ವೀರ್ ಸಾವರ್ಕರ್, ಸರ್ದಾರ್ ಪಟೇಲ್, ಲಾಲ್ ಬಹದ್ದೂರ್ ಶಾಸ್ತ್ರಿ, ಭಗತ್ ಸಿಂಗ್ ರಂತಹ ಮಹಾನ್ ದೇಶಭಕ್ತರನ್ನು ಸ್ಮರಿಸುವ ಸೌಜನ್ಯವಾಗಲಿ, ಐತಿಹಾಸಿಕ ಪ್ರಜ್ಞೆಯಾಗಲಿ ಇಲ್ಲದ ಕಾಂಗ್ರೆಸ್ ಹಾಗೂ ನಿಮಗೆ ಬಿಜೆಪಿ ಕುರಿತು ಮಾತನಾಡುವ ನೈತಿಕತೆ ಇಲ್ಲ.

ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ?

ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ?

ಬೆಂಗಳೂರು : ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಸಿಎಂ ಬಿಎಸ್ ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರದ ಘಟನೆ ಸಂಬಂಧ ಸರಣಿ ಟ್ವೀಟ್ ಗಳನ್ನ ಮಾಡಿರುವ ಸಿದ್ದರಾಮಯ್ಯ, ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸುವೆ.

ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಸಿಎಂ ಬಿಎಸ್ ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ?

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd