Bangalore | ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಲಾಠಿ ಚಾರ್ಜ್ lathi charge on students at Bangalore University
ಬೆಂಗಳೂರು : ಎಬಿವಿಪಿ ಕಾರ್ಯಕರ್ತರ ಮೇಲೆ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ವಿಶ್ವ ವಿದ್ಯಾಲಯದ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ನಡೆಸುತ್ತಿತ್ತು.
ಇದೇ ವೇಳೆ ರಾಯಚೂರಿನಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದನ್ನ ಖಂಡಿಸಿ ಬೆಂಗಳೂರು ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಬೇರೆ ಬೇರೆ ವಿಚಾರಗಳಿಗಾಗಿ ಪ್ರತಿಭಟನೆಗೆ ಮುಂದಾಗಿದ್ದ ಎಬಿವಿಪಿ ಮತ್ತು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದೆ.
ಈ ಹೀಗಾಗಿ ಪರಿಸ್ಥಿತಿ ಹತೋಟಿಗೆ ತರಲು ಸ್ಥಳಕ್ಕೆ ಆಗಮಿಸಿದ ಜ್ಞಾನ ಭಾರತಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ವರದಿಯಾಗಿದೆ.
ಅಂದಹಾಗೆ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆಗೆ ನಿನ್ನೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಹೀಗಿದ್ದರೂ ಎಬಿವಿಪಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಇತ್ತ ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಮತಿ ನೀಡಿದ್ದರು. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಲು ಆಗಮಿಸಿದ್ದಾರೆ. ಈ ವೇಳೆ ಗಲಾಟೆ ಆಗಿದೆ.









