ಬೆಳಗಾವಿ: ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ನಡೆದಿದೆ.
ಪ್ರತಿಭಟನಾಕಾರರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಪ್ರತಿಭಟನಾಕರರು ಮುತ್ತಿಗೆ ಹಾಕಲು ಯತ್ನಿಸಿದಾಗ, ಪೊಲೀಸರು ತಡೆದಿದ್ದಾರೆ. ಈ ವೇಳೆ ನೂಕಾಟ, ತಳ್ಳಾಟ ನಡೆದಿದೆ. ಆಗ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಉದ್ರಿಕ್ತರು ನಂತರ ರಾಜಕಾರಣಿಗಳ ಕಾರು ಹಾಗೂ ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.






