ರೈತರ ಪಂಪ್‌ಸೆಟ್‌ಗಳಿಗೆ ಸೌರಶಕ್ತಿ ವಿದ್ಯುತ್ ವಿತರಣೆಗೆ ಚಾಲನೆ – ವಿ ಸುನಿಲ್ ಕುಮಾರ್…
ರಾಜ್ಯದಲ್ಲಿ ರೈತರ ಪಂಪ್ ಸೆಟ್ ಗಳಿಗೆ ಹಸಿರು ವಿದ್ಯುತ್ ಯೋಜನೆಯಡಿ ಸೌರಶಕ್ತಿ ವಿದ್ಯುತ್ ವಿತರಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ನ ಶಿವಲಿಂಗೇಗೌಡ ಮತ್ತು ಇತರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಧಾನಮಂತ್ರಿ ಕುಸುಮ್ ಸಿ ಯೋಜನೆಯಡಿ ರಾಜ್ಯದಲ್ಲಿ ಹಸಿರು ವಿದ್ಯುತ್ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದೆ. ಇದರ ಅಡಿ, ಸೌರ ವಿದ್ಯುತ್ ಸೇರಿದಂತೆ ಇನ್ನಿತರೆ ನವೀಕರಿಸಬಹುದಾದ ಇಂಧನ ಮೂಲಗಳಿಗೆ ಒತ್ತು ನೀಡಲಾಗುತ್ತಿದೆ ಎಂದರು.
ಹಸಿರು ವಿದ್ಯುತ್ ಯೋಜನೆಯಡಿ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡುವ ಸಂಬಂಧ ಟೆಂಡರ್ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ರಾಜ್ಯದ 3 ಲಕ್ಷದ 37 ಸಾವಿರಕ್ಕೂ ಅಧಿಕ ರೈತರ ಪಂಪ್ ಸೆಟ್ ಗಳಿಗೆ ಸೌರಶಕ್ತಿಯ ಮೂಲಕ ವಿದ್ಯುತ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
Launch of solar power distribution to farmers’ pumpsets – V Sunil Kumar