ಚಿಕ್ಕಮಗಳೂರು: ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಲಾಯರ್ ಎನ್.ಟಿ. ಪ್ರೀತಮ್ ಮೇಲೆ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಿದ್ದ ವಕೀಲ ಪ್ರೀತಮ್ಗೆ ದಂಡ ಪಾವತಿಸುವುದಾಗಿ ಹೇಳಿದ್ದರು. ಈ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ವಕೀಲರನ್ನು ಕರೆ ತಂದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬೆನ್ನು, ಕೈ, ಎದೆ ಭಾಗಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಬೂಟ್ಗಾಲಿನಿಂದ ಒದ್ದು, ಹಾಕಿ ಸ್ಟಿಕ್ನಿಂದ ಬೆನ್ನಿಗೆ ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.